ಮುಂಬಯಿ, ಅ. 14: ಮಲಾಡ್ ಕನ್ನಡ ಸಂಘದ ವಾರ್ಷಿಕ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಶಾರದಾ ಮಹಾಪೂಜೆಯು ಅ. 6ರಂದು ಮಲಾಡ್ ಮಾರ್ವೇರೋಡ್, ಬಾಪ್ ಹೀರಾ ನಗರದ ದೀಪಮಾಲಾ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಹಾಲ್‌ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಂಜೆ 4ರಿಂದ ಪ್ರಾರಂಭಗೊಂಡ ವಿವಿಧ ಧಾರ್ಮಿಕ ಕಾರ್ಯ ಸಂಘದ ಸದಸ್ಯ ಸುಧಾಕರ ಶೆಟ್ಟಿ ದಂಪತಿ ಯಜಮಾನತ್ವ ವಹಿಸಿದ್ದರು. ಸಂಜೆ 6ರಿಂದ ಸಂಘದ ಸದಸ್ಯ ಬಳಗದವರಿಂದ ಭಜನೆ, ಪುರೋಹಿತರಿಂದ ಮತ್ತು ಸದಸ್ಯರ ಸಮ್ಮುಖದಲ್ಲಿ ಮಹಾಪೂಜೆ, ಮಹಾ ಮಂಗಳಾರತಿ ನಡೆಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮಾಜಿ ಶಾಸಕ ಅಸ್ಲಂ ಶೇಖ್, ಬೋಂಬೆ ಬಂಟ್ಸ್ ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಇನ್ನಿತರ ಧಾರ್ಮಿಕ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪರಿಸರದ ಅಸಂಖ್ಯಾತ ತುಳು- ಕನ್ನಡಿಗರು ಧಾರ್ಮಿಕ ಕಾರ್ಯ ಕ್ರಮದಲ್ಲಿ ಭಾಗವಹಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು.
ಸಂಘದ ಅಧ್ಯಕ್ಷ ಹರೀಶ್ ಎನ್. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಬಾಲಕೃಷ್ಣ ಎಸ್. ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರಕಾಶ್ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿ ಅನಿಲ್ ಎಸ್. ಪೂಜಾರಿ, ಜತೆ ಕೋಶಾಧಿಕಾರಿ ಶಂಕರ ಆರ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರವಿ ಬಾಲಚಂದ್ರ ರಾವ್, ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ, ಕಾರ್ಯದರ್ಶಿ ಸುಂದರ ಪೂಜಾರಿ ವಲಪಾಡಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಗೌರವ ಪ್ರಧಾನ ಕಾರ್ಯದರ್ಶಿ ಶಂಕರ ಡಿ. ಪೂಜಾರಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿ. ಆರ್. ಬಾಲಚಂದ್ರ ರಾವ್ ಮತ್ತು ಮಕ್ಕಳ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಿತು. ತುಳು-ಕನ್ನಡಿಗರು, ಭಕ್ತಾದಿಗಳು, ಸದಸ್ಯ ಬಾಂಧವರು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ-ವರದಿ: ರಮೇಶ್ ಉದ್ಯಾವರ