Advertisement
ನೈಸರ್ಗಿಕವಾಗಿ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡ ಈ ವಿಶಿಷ್ಟ ನಾಗಬನದಲ್ಲಿ ನಾಗರಪಂಚಮಿ ಯಂತಹ ಪರ್ವದಿನದಲ್ಲಾಗಲೀ, ಭಕ್ತರು ಬಯಸಿದ ಇತರ ದಿನದಲ್ಲಾಗಲೀ ಪೂಜೆಗೆ ಅವಕಾಶವಿಲ್ಲ. ವರ್ಷಕ್ಕೊಮ್ಮೆ ಮಾತ್ರ ವಿವಿಧ ಜಿಲ್ಲೆಗಳ ಪರಿಶಿಷ್ಟ ವರ್ಗದ ಮೊಗೇರ ಸಮುದಾಯದವರಿಂದ ಈ ನಾಗಬನದಲ್ಲಿ ಪೂಜೆ ನಡೆಯುವುದು ಸಂಪ್ರದಾಯವಾಗಿದೆ.
Related Articles
ಪರಿಶಿಷ್ಟ ವರ್ಗದ ಮೊಗೇರ ಸಮುದಾಯದ 16 ಬಳಿ ಸಾವಿರ ಮಾಗಣೆಯ ಪ್ರಧಾನ ನಾಗಬನವಾಗಿದ್ದು ಈ ವಾರ್ಷಿಕ ಆರಾಧನೆ ಪುರಾತನ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆದುಕೊಂಡು ಬರುತ್ತಿದೆ. ಶಿರ್ವ ಸೊರ್ಪು ಶ್ರೀಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರರಿಗೆ ಮಾತ್ರ ಸನ್ನಿಧಿಯಲ್ಲಿ ತಂಪೆರೆಯುವ ಪೂಜೆ ಸಲ್ಲಿಸುವ ಅಧಿಕಾರವಿದ್ದು , ಈ ನಾಗಬನದಲ್ಲಿ ಮಾತ್ರ ತುಳು ಬೇಷ ತಿಂಗಳ ಮೊದಲ ಗುರುವಾರ ನಾಗಾರಾಧನೆ ನಡೆಯುವುದು ಕರಾವಳಿಯಲ್ಲಿ ವಿಶೇಷವಾಗಿದೆ.
Advertisement