Advertisement

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

11:34 AM May 22, 2024 | Team Udayavani |

ಬೆಂಗಳೂರು: ನೆಲಮಂಗಲ ತಾಲೂಕಿನ ಹನುಮಂತಪುರ, ಬಿದ್ಲೂರು, ಕೋಡಿ ಪಾಳ್ಯ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯು (ಕೆಐಎಡಿಬಿ) ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವ ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ 3 ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಯ ಮಗಳ ಪ್ರಕಾರ ಪ್ರಾಥಮಿಕ ಅಧಿಸೂಚನೆ ಹೊರಡಿ ಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು ಮತ್ತು ಕಟ್ಟಡಗಳಿಗೆ ಮಾತ್ರ ಪರಿಹಾರ ಕೊಡಲಾಗುವುದು. ಆದರೆ ಕೆಲವೆಡೆಗಳಲ್ಲಿ ವಿಪರೀತ ಪರಿಹಾರ ದಕ್ಕಿಸಿಕೊಳ್ಳಲೆಂದೇ ಕೆಲವರು ಅಧಿಸೂಚಿತ ಜಮೀನುಗಳಲ್ಲಿ ಬೇರೆಡೆ ಬೆಳೆದು ನಿಂತಿರುವ ಬಲಿತ ಗಿಡಮರಗಳನ್ನು ತಂದು ನೆಡುತ್ತಿರುವ ಪ್ರಕರಣ ಗಳು ಬೆಳಕಿಗೆ ಬರುತ್ತಿವೆ.

ಈ ಕಾರಣಕ್ಕೆ ಈ ಆದೇಶ ಮಾಡಿದ್ದು, ತನಿಖಾ ತಂಡ ದಲ್ಲಿ ಕೆಐಎಡಿಬಿ ಮುಖ್ಯ ಎಂಜಿನಿಯರ್‌ ಕೂಡ ಇರಲಿದ್ದಾರೆ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಅಥವಾ ಇಸ್ರೋದ ಸ್ಯಾಟಲೈಟ್‌ ಮ್ಯಾಪಿಂಗ್‌ ಆಧರಿಸಿಯೇ ಅಧಿಸೂಚಿತ ಜಮೀನುಗಳಿಗೆ ಪರಿಹಾರ ವಿತರಿಸುವುದನ್ನು ಕಡ್ಡಾಯಗೊಳಿಸಲಾ ಗುವುದು. ಅಧಿಸೂಚನೆ ಹೊರಡಿಸಿದ ನಂತರ ಹೆಚ್ಚಿನ ಪರಿಹಾರಕ್ಕಾಗಿ ಗಿಡ, ಮರ ತಂದು ನೆಡುವುದರ ಮೂಲಕ ಸಂಸ್ಥೆಗೆ ನಷ್ಟ ಉಂಟು ಮಾಡಿದರೆ ಅದಕ್ಕೆ ಸಂಬಂಧಪಟ್ಟ ವಿಶೇಷ ಭೂಸ್ವಾಧೀನಾಧಿ ಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಹಾಗೆಯೇ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದೂ ಮಹೇಶ ಎಚ್ಚರಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next