Advertisement
ಚಂದಾಪುರ ಪುರಸಭೆಯ ಹೀಲಲಿಗೆ ಗ್ರಾಮದ ನಿವಾಸಿ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಹರೀಶ್ ಕೊಲೆಯಾದವ. ಬುಧವಾರ ರಾತ್ರಿ 11.30 ಗಂಟೆಯಲ್ಲಿ ಹರೀಶ್ ತನ್ನ ಬೈಕ್‌ನಲ್ಲಿ ಚಂದಾಪುರ ಕಡೆಯಿಂದ ಹೀಲಲಿಗೆ ಗ್ರಾಮದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕೃತ್ಯ ನಡೆದಿದೆ.
Related Articles
Advertisement
ಜಗಳವೂ ಕಾರಣವಿರಬಹುದು: ಈ ನಡುವೆ ಕೆರೆಯಲ್ಲಿ ಮೀನು ಹಿಡಿಯುವ ಬಗ್ಗೆ ಆತನ ಜೊತೆಯಲ್ಲಿದ್ದ ಹುಡುಗರೊಂದಿಗೆ 3 ದಿನಗಳಹಿಂದೆ ಜಗಳವಾಗಿತ್ತು. ಈ ಹಿನ್ನಲೆಯಲ್ಲಿ ಘಟನೆ ಸಂಭವಿಸಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ.
ಸರ್ಕಾರ ವಿಫಲವಾಗಿದೆ ಎಂದ ನಾರಾಯಣಸ್ವಾಮಿ: ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ರಕ್ಷಣೆ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ತಾಲೂಕು ಪೋಲೀಸರದ್ದೂ ವೈಫಲ್ಯವಿದೆ ಎಂದು ಮಾಜಿ ಸಚಿವ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ತಡೆ ಪ್ರತಿಭಟನೆ: ಹರೀಶ್ ಕೊಲೆ ಖಂಡಿಸಿ ಚಂದಾಪುರ ವೃತ್ತದ ಬಳಿ ಸ್ಥಳೀಯ ನಾಗರಿಕರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಜಂಗಲ್‌ರಾಜ್ ಎಂದ ಬಿಎಸ್‌ವೈ ಬೆಂಗಳೂರು: ಹರೀಶ್ ಕೊಲೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಖಂಡಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಕೇರಳದ ಜಂಗಲ್‌ರಾಜ್ ಮಾದರಿಯನ್ನು ರಾಜ್ಯದಲ್ಲೂ ಜಾರಿಗೆ ತರಲು ಹೊರಟಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರ ಸರಣಿ ಕೊಲೆಗಳಾಗುತ್ತಿವೆ. ಇದು ಒಂದು ನಾಗರಿಕ ಸರ್ಕಾರ ವರ್ತಿಸುವ ರೀತಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ರಾಜಕೀಯ ವೈಷಮ್ಯದ ಕೊಲೆಯಲ್ಲಿ ಸಿದ್ದರಾಮಯ್ಯ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಸ್ಪರ್ಧೆಗಿಳಿದಿದ್ದಾರೆ. ಕರ್ನಾಟಕವನ್ನೂ ಕೇರಳದಂತೆ ಜಂಗಲ್ ರಾಜ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರರನ್ನು ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂಬುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಇವೆಲ್ಲವೂ ಸಾಕ್ಷಿ ಎಂದು ಹೇಳಿದ್ದಾರೆ. ಹರೀಶ್ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಕೊಲೆ ಕುರಿತು ಎನ್‌ಐಎ ತನಿಖೆಗೆ ಆಗ್ರಹ
ಬೆಂಗಳೂರು: ಬಿಜೆಪಿಯ ಆನೇಕಲ್ ತಾಲೂಕು ಎಸ್‌ಸಿ, ಎಸ್‌ಟಿ ಘಟಕದ ಉಪಾಧ್ಯಕ್ಷ ಹೀಲಲಿಗೆ ಹರೀಶ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಕಳೆದ ನಾಲ್ಕು ವರ್ಷಗಳಲ್ಲಿ ಆನೇಕಲ್ ತಾಲೂಕಿನಲ್ಲಿ ನಾಲ್ವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಹತ್ಯೆಯಾಗಿದ್ದು, ಈ ಎಲ್ಲಾ ಪ್ರಕರಣಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರರಾದ ಡಾ.ವಾಮನಾಚಾರ್ಯ, ಅಶ್ವತ್ಥನಾರಾಯಣ ಮತ್ತು ಮುಖಂಡ ಚಿ.ನಾ.ರಾಮು, ಕಳೆದ ಮಾ. 13ರಂದು ಆನೇಕಲ್ ಪುರಸಭೆ ಸದಸ್ಯ ಶ್ರೀನಿವಾಸ್ ಅಲಿಯಾಸ್ ವಾಸು ಎಂಬುವರನ್ನು ಕೊಲೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಪುರಸಭೆ ಸದಸ್ಯೆ ಮತ್ತು ಆಕೆಯ ಪುತ್ರ ಇನ್ನೂ ಜೈಲಿನಲ್ಲಿದ್ದಾರೆ. ಇದೇ ರೀತಿ ಹಿಂದೆಯೂ ಎರಡು ಕೊಲೆಗಳು ನಡೆದಿದ್ದು, ಈಗ ಹರೀಶ್ ಎಂಬುವರನ್ನು ಕೊಲೆ ಮಾಡಲಾಗಿದೆ. ಆದ್ದರಿಂದ ಈ ಎಲ್ಲಾ ಪ್ರಕರಣಗಳ ಕುರಿತು ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.