Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ಲಾಸ್ಟಿಕ್ ಮುಕ್ತ ಮೈಸೂರು ಮಾಡುವ ನೆಪದಲ್ಲಿ ಹಣ ಲೂಟಿ ಮಾಡಲಾಗಿದೆ. ಬಟ್ಟೆ ಬ್ಯಾಗ್ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಮಾಡಿದ್ದು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಅನುಮತಿ ಪಡೆಯದೆ ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ ಎಂದರು.
Related Articles
Advertisement
ಕರ್ನಾಟಕದ ತೆರಿಗೆ ಹಣ ಆಂಧ್ರದಲ್ಲಿ ಆಸ್ತಿ ಮಾಡುವವರ ಪಾಲಾಗುತ್ತಿದೆ. ಈ ಭ್ರಷ್ಟಾಚಾರ ಮುಚ್ಚಿಹಾಕಿಕೊಳ್ಳಲು ಮುಖ್ಯಮಂತ್ರಿಗಳ ಮನೆಗೆ ಹೋಗಿದ್ದರಾ? ಎಂದು ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ ಸಾ.ರಾ.ಮಹೇಶ್, ಇವತ್ತು ಸಿಎಂ, ಸಿಎಸ್ ಭೇಟಿ ಮಾಡುತ್ತೇನೆ. ಸಿಂಧೂರಿಯನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡದಿದ್ರೆ ಧರಣಿ ಕೂರುತ್ತೇನೆ ಎಂದು ಎಚ್ಚರಿಸಿದರು.
ಇಂತಹ ದಕ್ಷತೆ ಇಲ್ಲದ ಅಪ್ರಾಮಾಣಿಕ ಅಧಿಕಾರಿಯನ್ನು ನೇಮಕ ಮಾಡಬೇಡಿ ಎಂದು ಹೇಳಿದ್ದೆ. ಸ್ವಿಮ್ಮಿಂಗ್ ಪೂಲ್, ಜಿಮ್, ಕಟ್ಟಡ ನವೀಕರಣದ ಹಣವನ್ನು ಅವರಿಂದಲೇ ಭರಿಸುವಂತೆ ಒತ್ತಾಯ ಮಾಡಿದ್ದೇನೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನ ಭೇಟಿ ಮಾಡಿದ್ದೇನೆ ಎಂದರು.
ಯಾವುದೇ ಸಂದರ್ಭದಲ್ಲಿ, ಯಾವುದೇ ಅಧಿಕಾರಿಗಳ ಬಗ್ಗೆ ರಾಜಕಾರಣಿಗಳು ಮಾತನಾಡುವ ಸಂದರ್ಭದಲ್ಲಿ ಸಾರ್ವಜನಿಕವಾಗಿ ಬೇರೆ ರೀತಿ ಮಾತನಾಡುತ್ತಾರೆ. ಇನ್ನೂ ಮಹಿಳಾ ಅಧಿಕಾರಿಯಾದರೆ ದೇವರೇ ಗತಿ. ಆ ಅಧಿಕಾರಿಯ ಹನ್ನೆರಡು ವರ್ಷಗಳ ಸೇವೆಯನ್ನು ನೋಡಿದ್ದೇನೆ. ನಾನು ಎಂಟು ಆರೋಪ ಮಾಡಿದ್ದೆ. ಅದರಲ್ಲಿ ಅವರದ್ದೆ ಅಧಿಕಾರಿಗಳು ವರದಿ ಕೊಟ್ಟಿದ್ದಾರೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದರು.