Advertisement

ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ: ಗುಜರಾತ್ ಮೂಲದ ವ್ಯಕ್ತಿಗೆ ಸೋಂಕು

08:29 AM May 17, 2020 | keerthan |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ವೈರಸ್ ಪಾಸಿಟಿವ್ ಧೃಡಪಟ್ಟಿದೆ. ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್ಲುನಲ್ಲಿ ಗುಜರಾತ್ ಮೂಲದ 46 ವರ್ಷದ ವ್ಯಕ್ತಿಗೆ ಕೋವಿಡ್-19 ಪತ್ತೆಯಾಗಿದೆ.

Advertisement

ತೋರಣಗಲ್ಲುನಲ್ಲಿ ಕ್ವಾರಂಟೈನ್ ನಲ್ಲಿ ಇದ್ದ ಈತನಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತನನ್ನು ಶುಕ್ರವಾರ ರಾತ್ರಿ ನಗರದ ಕೋವಿಡ್-19 (ಜಿಲ್ಲಾ) ಆಸ್ಪತ್ರೆಗೆ ಕರೆತರಲಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಸೋಂಕಿನಿಂದ ಗುಣಮುಖರಾದ 13 ಜನರು ಮನೆಗೆ ತೆರಳಿದ್ದಾರೆ.  ಇನ್ನುಳಿದ 5 ಪ್ರಕರಣಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next