ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಒಂದೇ ದಿನ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.
ಗಂಗಾವತಿ ತಾಲೂಕಿನ 51 ವರ್ಷದ ವ್ಯಕ್ತಿಗೆ ಇತ್ತೀಚೆಗೆ ಸೋಂಕು ದೃಢವಾಗಿತ್ತು. ಆತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗುರುವಾರ ಸೋಂಕಿಗೆ ಈತ ಬಲಿಯಾಗಿದ್ದಾನೆ. ಈತನು ಈ ಹಿಂದೆ ಹಲವು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದನು ಎನ್ನುವ ಮಾಹಿತಿ ಲಭ್ಯವಾಗಿದೆ.
ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ತಾಗಿದ್ದು, ಇಂದು ಸಾವನ್ನಪ್ಪಿದ್ದಾರೆ.
ಇಂದಿನ ಈ ಎರಡು ಸಾವು ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್-19 ಸಾವಿನ ಸಂಖ್ಯೆಯು ನಾಲ್ಕಕ್ಕೆ ಏರಿಕೆಯಾದಂತಾಗಿದೆ.
ಮೃತ ವ್ಯಕ್ತಿಗಳ ಅಂತ್ಯ ಸಂಸ್ಕಾರಕ್ಕೆ ಆರೋಗ್ಯ ಇಲಾಖೆ ಸರ್ಕಾರದ ಮಾರ್ಗದರ್ಶಿ ಅನ್ವಯ ಸಿದ್ದತೆ ನಡೆಸಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.