Advertisement

ಬಳ್ಳಾರಿ ನಗರದ ಕೌಲ್ ಬಜಾರ್ ಪ್ರದೇಶದಲ್ಲಿ ಮತ್ತೊಂದು ಕೋವಿಡ್-19 ಸೋಂಕು ಪತ್ತೆ

12:51 PM May 05, 2020 | keerthan |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ 8 ಜನರು ಗುಣಮುಖರಾಗಿ ಮನೆ ಸೇರಿದ ಬೆನ್ನಲ್ಲೇ ನಗರದ ಕೌಲ್ ಬಜಾರ್ ಪ್ರದೇಶದಲ್ಲಿ ಮತ್ತೊಂದು ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೌಲ್ ಬಜಾರ್ ನ ಪ್ರದೇಶದ 14, ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಕಣೇಕಲ್ ಗ್ರಾಮದ 4 ಜನರು ಸೇರಿ ಒಟ್ಟು 18 ಜನರು ಕಳೆದ ಮಾರ್ಚ್ 16 ರಂದು ತೀರ್ಥ ಕ್ಷೇತ್ರಗಳಿಗೆ ಹೋಗಿದ್ದು, ಉತ್ತರಾಖಂಡ್ ರಾಜ್ಯದ ಲುಡಿಕಿಯಲ್ಲಿ ಲಾಕ್ ಡೌನ್ ಆಗಿದ್ದರು. ಎರಡು ದಿನಗಳ ಹಿಂದೆ ನಗರಕ್ಕೆ ಬಂದಿದ್ದು, ಇವರನ್ನು ತಪಾಸಣೆ ಮಾಡಿ, ಸ್ವಾಬ್ ಪಡೆದು ಹೋಂ ಕ್ವಾರಂಟೈನ್ ಗೆ ಮಾಡಲಾಗಿತ್ತು. ಈ ಪೈಕಿ ಕೌಲ್ ಬಜಾರ್ ನ ಒಬ್ಬರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಅವರು ವಿವರಿಸಿದರು.

ಕೋವಿಡ್-19 ಸೋಂಕು ಪತ್ತೆಯಾದವರನ್ನು ಈಗಾಗಲೇ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಸೋಂಕಿತರ ಮಗಳು, ಅಳಿಯ ಸೇರಿ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 22 ಜನರನ್ನು ಸಹ ಸಾಂಸ್ಥಿಕ ಪ್ರತ್ಯೇಕವಾಸದಲ್ಲಿ ಇಡಲಾಗಿದೆ ಎಂದವರು ತಿಳಿಸಿದ್ದಾರೆ.

ಅಂತರ್ ರಾಜ್ಯದಿಂದ ಬಂದರೆ ಕ್ವಾರಂಟೈನ್; ನೆರೆಯ ಆಂಧ್ರಪ್ರದೇಶ, ತೆಲಂಗಾಣ ಸೇರಿ ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಯಾರೇ ಬಂದರೂ ಅಂತಹವರನ್ನು 14 ದಿನಗಳ ಕಾಲ ಸಾಂಸ್ಥಿಕ ಪ್ರತ್ಯೇಕ ವಾಸದಲ್ಲಿ ಇಡುವುದು ಕಡ್ಡಾಯ. ಒಂದು ವೇಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಗೆ ಬರುವವರು ಅಲ್ಲಿನ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಆಂಬ್ಯುಲೆನ್ಸ್ ನಲ್ಲಿ ಮಾತ್ರ ಬರುವವರಿಗೆ ಅವಕಾಶ ನೀಡಲಾಗುವುದು. ಅದನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಜಿಲ್ಲೆಗೆ ಬಂದರೆ ಅಂತಹವರನ್ನು 14 ದಿನಗಳ ಕಾಲ ಸಾಂಸ್ಥಿಕ ಪ್ರತ್ಯೇಕ ವಾಸದಲ್ಲಿ ಇಡಲಾಗುವುದು ಎಂದವರು ಎಚ್ಚರಿಸಿದರು.

ಎಸ್ ಪಿ ಸಿ.ಕೆ.ಬಾ ಮಾತನಾಡಿ, ಬಳ್ಳಾರಿ ಜಿಲ್ಲೆಗೆ ಹೊಂದಿಕೊಂಡಿರುವ ಅಂತರಾಜ್ಯ ಗಡಿಯಲ್ಲಿನ 21 ಹಳ್ಳಿಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗುವುದು. ಇಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ, ಕಾಲುದಾರಿ ಸೇರಿ ಇತರೆ ಮಾರ್ಗಗಳ ಮೂಲಕ ಬರುವವರ ಮೇಲೆ ನಿಗಾವಹಿಸಲಾಗುವುದು ಎಂದು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಸಿಇಒ ಕೆ. ನಿತೀಶ್, ಎಡಿಸಿ ಮಂಜುನಾಥ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next