Advertisement

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

08:37 PM Jul 16, 2020 | keerthan |

ಉಡುಪಿ: ಕಳೆದ ಕೆಲವು ದಿನಗಳಿಂದ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿನ ಕುಸಿತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಗುರುವಾರ ಜಿಲ್ಲೆಯಲ್ಲಿ 109 ಹೊಸ ಕೋವಿಡ್ ಪ್ರಕರಣಗಳು ದೃಢವಾಗಿದೆ.

Advertisement

ಇಂದಿನ ಹೊಸ 109 ಕೋವಿಡ್ ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1895ಕ್ಕೆ ಏರಿಕೆಯಾಗಿದೆ. ಈ ಪೈಕಿ 1462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 428 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಮೂವರು ಪೊಲೀಸರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಒಬ್ಬರು ಎಎಸ್ಐ, ಮತ್ತು ಇಬ್ಬರು ಸಿಬ್ಬಂದಿಗಳು ಸೋಂಕಿತರಾಗಿದ್ದಾರೆ. ಇವರಿಗೆ ಕುಂದಾಪುರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಜಿಲ್ಲೆಯ ಪಡುಬಿದ್ರಿಯಲ್ಲಿ ಅಂಗಡಿ ಮುಂಗಟ್ಟುಗಳ ಮಾಲಕರನ್ನು ಮತ್ತು ಸಿಬ್ಬಂದಿಗಳ ರಾಂಡಮ್ ಟೆಸ್ಟ್ ಮಾಡಿಸಲಾಗಿದೆ. ಈ ವೇಳೆ ಹೋಟೆಲೊಂದರ ಇಬ್ಬರು ಸಿಬ್ಬಂದಿಗಳು ಮತ್ತು ವ್ಯವಹಾರ ಮಳಿಗೆಯ ಓರ್ವ ಸಿಬ್ಬಂದಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಇಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

Advertisement

ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಇಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಒಬ್ಬರು ಉಡುಪಿ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ ಮತ್ತೊಬ್ಬರು ಕುಂದಾಪುರದ ಆಸ್ಪತ್ರೆಯಲ್ಲಿ ಸೋಂಕಿನಿಂದ ಮರಣ ಹೊಂದಿದ್ದಾರೆ.

ಜಿಲ್ಲೆಯಲ್ಲಿಂದು 598 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 489 ಮಾದರಿಯ ಫಲಿತಾಂಶ ನೆಗೆಟಿವ್ ಆಗಿದ್ದು, 109 ಮಾದರಿಯ ಫಲಿತಾಂಶ ಪಾಸಿಟಿವ್ ಆಗಿದೆ.

ಜಿಲ್ಲೆಯಲ್ಲಿ ಇದುವರೆಗೆ 23,645 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಅದರಲ್ಲಿ 21,156 ಜನರ ಮಾದರಿ ನೆಗೆಟಿವ್ ಆಗಿದ್ದರೆ, 1895 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಫಲಿತಾಂಶ ಪಾಸಿಟಿವ್ ಆಗಿದೆ. ಇನ್ನೂ 594 ಮಾದರಿ ಫಲಿತಾಂಶ ಬಾಕಿಯಿದೆ.

Advertisement

Udayavani is now on Telegram. Click here to join our channel and stay updated with the latest news.

Next