Advertisement

ಬೆಂಗಳೂರಿನ ಮತ್ತೋರ್ವ ಬಾಲಕನಿಗೆ ಸೋಂಕು: 215ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

09:12 AM Apr 12, 2020 | keerthan |

ಬೆಂಗಳೂರು: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೋರ್ವ ಬಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆ 215ಕ್ಕೇರಿದೆ.

Advertisement

ಸೋಂಕಿತ ಸಂಖ್ಯೆ 92ರ ವ್ಯಕ್ತಿಯ ಸಂಪರ್ಕಕ್ಕೆ ಬಂದ 10 ವರ್ಷದ ಮಗನಿಗೆ ಸೋಂಕು ತಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು ಎಂಟು ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಸೋಂಕಿತರ ಸಂಖ್ಯೆ 215ಕ್ಕೇರಿದೆ.

ರಾಜ್ಯದಲ್ಲಿ ಇದುವರೆಗೆ ಆರು ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, 39 ಜನರು ಚಿಕಿತ್ಸೆ ಮುಗಿಸಿ, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಒಟ್ಟು ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  215 ಸೋಂಕಿತರಲ್ಲಿ 6 ಸೋಂಕಿತರು ಕೇರಳದವರು ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next