Advertisement

ಹಿರೇಬಾಗೇವಾಡಿಯಲ್ಲಿ ಮತ್ತೊಬ್ಬನಿಗೆ ಸೋಂಕು:  ಬೆಳಗಾವಿಯಲ್ಲಿ 73ಕ್ಕೇರಿದ‌ ಸೋಂಕಿತರ ಸಂಖ್ಯೆ

08:16 AM May 03, 2020 | keerthan |

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಶನಿವಾರ ಮತ್ತೊಬ್ಬ ಯುವಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73ಕ್ಕೇರಿದಂತಾಗಿದೆ.

Advertisement

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ 23 ವರ್ಷದ ಯುವಕನಿಗೆ ಸೋಂಕು ಕಂಡು ಬಂದಿದ್ದು, ಸೋಂಕಿತ ಸಂಖ್ಯೆ128ರ ದ್ವಿತೀಯ ಸಂಪರ್ಕದಿಂದ ಈತನಿಗೆ ಸೋಂಕು ತಾಗಿರುವುದು ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರದೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಜಿಲ್ಲೆಯ ಜನರಿಗೆ ಆತಂಕಕ್ಕೆ ಕಾರಣವಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73 ಕ್ಕೆ ಏರಿದ್ದರೆ,‌ಹಿರೇಬಾಗೇವಾಡಿಯಲ್ಲಿ ಕೋವಿಡ್19 ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next