Advertisement
ಮಡಿಕೇರಿ ತಾಲ್ಲೂಕು ಎಮ್ಮೆಮಾಡು ಗ್ರಾಮದ ನಿವಾಸಿ 50 ವರ್ಷದ ಪುರುಷರೊಬ್ಬರು ಈ ಹಿಂದಿನಿಂದಲೂ ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಪಾರ್ಶ್ವವಾಯು ಕಾಯಿಲೆಗೆ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸೆ.8ರಂದು ಕಫ ಸಮಸ್ಯೆಯಿಂದ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ (ಅಶ್ವಿನಿ ಆಸ್ಪತ್ರೆಗೆ) ಬಂದಿದ್ದು, ಆಗ ಅವರಿಗೆ ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.
Related Articles
Advertisement