ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಇದೀಗ ದೆಹಲಿ ಸಾರಿಗೆ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ ಕಳುಹಿಸಿದ ನೊಟೀಸ್ ನಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಕೈಲಾಶ್ ಗಹ್ಲೋಟ್ ಅವರನ್ನು ಕೇಳಿಕೊಂಡಿದೆ.
ನಜಾಫ್‌ಗಢದ ಆಮ್ ಆದ್ಮಿ ಪಕ್ಷದ ಶಾಸಕರಾಗಿರುವ ಗೆಹ್ಲೋಟ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಮತ್ತು ಪಿಎಂಎಲ್‌ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಗೆಹ್ಲೋಟ್ ಅವರನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ ಎನ್ನಲಾಗಿದೆ, ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ: Water Crisis; ಕರ್ನಾಟಕ ಸೇರಿ ದಕ್ಷಿಣ ಭಾರತದ ಜಲಾಶಯಗಳು ಖಾಲಿ.. ಖಾಲಿ!