Advertisement

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪೊಲೀಸರ ಬಲೆಗೆ ಬಿದ್ದ ಮತ್ತೋರ್ವ ಆರೋಪಿ

11:03 AM Jul 29, 2022 | Team Udayavani |

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.  ಕಾಣಿಯೂರಿನಲ್ಲಿ ವಶ ಪಡಿಸಿಕೊಳ್ಳಲಾಗಿದ್ದು, ಆರೋಪಿ ಬೆಳ್ಳಾರೆ ಮೂಲದವನು ಎಂಬ ಮಾಹಿತಿ ಇದೆ.

ಇದನ್ನೂ ಓದಿ:ಸಿ.ಎಂ. ಬೊಮ್ಮಾಯಿ, ಗೃಹ ಮಂತ್ರಿ ಅರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹ

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನೈಜ ಹಂತಕರು ಯಾರು?

Advertisement

ಪ್ರವೀಣ್‌ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಶೋಧ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿ 27 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಂತಕರು ಕೇರಳದವರು ಎಂಬ ಅನುಮಾನ ಇದ್ದು, ಅವರಿಗೆ ಮಾಹಿತಿದಾರರಾಗಿ ಸ್ಥಳೀಯರು ಸಹಕರಿಸಿದ್ದರೇ ಅಥವಾ ಕೃತ್ಯದಲ್ಲಿ ಸ್ಥಳೀಯರು ನೇರವಾಗಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next