ಚಂಡೀಗಢ: ಪಂಜಾಬ್ ನ ಅಮೃತಸರದಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸ್ವರ್ಣ ಮಂದಿರದ ಸಮೀಪ ಸೋಮವಾರ(ಮೇ 08)ವೂ ಮತ್ತೊಂದು ಸ್ಫೋಟ ಸಂಭವಿಸಿದೆ. ಭಾನುವಾರ ರಾತ್ರಿ ಇದೇ ಪ್ರದೇಶದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದ ಘಟನೆ ನಡೆದಿತ್ತು.
ಇದನ್ನೂ ಓದಿ:SSLC ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ
ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಸ್ವರ್ಣ ಮಂದಿರಕ್ಕೆ ತೆರಳುವ ಸರಗರ್ಹಿ ಸರೈ ಮಾರ್ಗದ ಸಮೀಪ ಸೋಮವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ, ಗಾಯಗೊಂಡ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.
Related Articles
ಸ್ವರ್ಣ ಮಂದಿರ ಪ್ರದೇಶದ ಸುತ್ತಮುತ್ತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಾಂಬ್ ಸ್ಕ್ವಾಡ್, ಎಫ್ ಎಸ್ ಎಲ್ ತಂಡ ಶೋಧ ಕಾರ್ಯ ನಡೆಸುತ್ತಿರುವುದಾಗಿ ಅಮೃತಸರದ ಎಡಿಸಿಪಿ ಮೆಹತಾಬ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.