Advertisement

ಜಿಯೋ ಗ್ರಾಹಕರಿಗೆ ಇನ್ನೊಂದು ಸಿಹಿ ಸುದ್ದಿ

06:05 PM Oct 11, 2021 | Team Udayavani |

ಬೆಂಗಳೂರು: ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ (ಆರ್‌ ಜೆ ಐ ಎಲ್) ತನ್ನ ಗ್ರಾಹಕರಿಗೆ ಕರೆಯ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ 1800 ಬ್ಯಾಂಡ್‌ನಲ್ಲಿ ಹೆಚ್ಚುವರಿ 5MHz ತರಂಗಾಂತರವನ್ನು ಅಳವಡಿಸಿದೆ.

Advertisement

ಇದರೊಂದಿಗೆ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಡಿಒಟಿ ನಡೆಸಿದ ತರಂಗಾಂತರ (ಸ್ಪೆಕ್ಟ್ರಂ) ಹರಾಜಿನಲ್ಲಿ ಖರೀದಿಸಿದ ಹೆಚ್ಚುವರಿ 20MHz ತರಂಗಾಂತರದ ಅಳವಡಿಕೆಯನ್ನು ಪೂರ್ಣಗೊಳಿಸಿದಂತಾಗಿದೆ.

ಈ ತರಂಗಾಂತರ ವೃದ್ಧಿಯು ಕರ್ನಾಟಕದಲ್ಲಿನ ಗ್ರಾಹಕರಿಗೆ ನೆಟ್‌ವರ್ಕ್ ಅನುಭವವನ್ನು ಪರಿಣಾಮಕಾರಿಯಾಗಿ ಹೆಚ್ಚಿಸಿದೆ. 850MHZ, 1800MHZ ಮತ್ತು 2300MHZ ಬ್ಯಾಂಡ್‌ಗಳಲ್ಲಿ ಹೆಚ್ಚುವರಿಯಾಗಿ 60MHz ಅಳವಡಿಸಲಾಗಿದೆ. ಇದರಿಂದ ಕರ್ನಾಟಕದಾದ್ಯಂತ ನೆಟ್‌ವರ್ಕ್ ಗುಣಮಟ್ಟ ಸುಧಾರಿಸಿದ್ದು, ಚಂದಾದಾರರ ಅನುಭವ ಸುಧಾರಣೆಗೆ ನೆರವಾಗಿದೆ. ರಾಜ್ಯಾದ್ಯಂತ ಇರುವ ನಿಯೋಜಿತ ನೆಟ್‌ವರ್ಕ್‌ ಸೈಟ್‌ಗಳ ವಿಚಾರದಲ್ಲಿ ಮತ್ತು ತನ್ನ ಚಂದಾದಾರರಿಗೆ ಉತ್ತಮ ಗುಣಮಟ್ಟದ ನೆಟ್‌ವರ್ಕ್ ನೀಡುವ ಬದ್ದತೆಯನ್ನು ಮುಂದುವರೆಸಿದೆ.

ಇದನ್ನೂ ಓದಿ :60 ಸಾವಿರ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, 18 ಸಾವಿರ ಸಮೀಪಕ್ಕೆ ನಿಫ್ಟಿ

ಈ ತರಂಗಾಂತರ ವೃದ್ಧಿಯು, ಮನೆಯಿಂದ ಕೆಲಸ ಮಾಡುವ ವೃತ್ತಿಪರರು, ಆನ್‌ಲೈನ್ ತರಗತಿಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಮನೆಯಲ್ಲಿ ಸುರಕ್ಷಿತವಾಗಿದ್ದುಕೊಂಡು ಯಾವುದೇ ತಡೆರಹಿತವಾಗಿ ಉದ್ಯಮವನ್ನು ಮನೆಯಿಂದಲೇ ನಡೆಸಲು ಸಹಕಾರಿಯಾಗುತ್ತದೆ. ಹೆಚ್ಚಿಸಲಾದ ಸಂಪರ್ಕ ಜಾಲ ಮತ್ತು ಅನುಭವವು ಹೊರಭಾಗದಲ್ಲಿನ ಅಗತ್ಯ ಕೆಲಸಗಳಲ್ಲಿ ತೊಡಗಿರುವ ವೈದ್ಯಕೀಯ ಹಾಗೂ ಇತರೆ ಮುಂಚೂಣಿ ಕೆಲಸಗಾರರಿಗೆ ಖಂಡಿತವಾಗಿಯೂ ಬಹು ದೊಡ್ಡ ನೆರವು ನೀಡಲಿದೆ.

Advertisement

ಕರ್ನಾಟಕದಲ್ಲಿ ಜಿಯೋ 2.21 ಕೋಟಿಗೂ ಅಧಿಕ ಗ್ರಾಹಕರನ್ನು ಹೊಂದಿದೆ (ಜುಲೈ ಟ್ರಾಯ್ ವರದಿ ಪ್ರಕಾರ), ಮತ್ತು ಪ್ರತಿ ಜಿಲ್ಲೆಯಲ್ಲಿಯೂ ಮತ್ತಷ್ಟು ಚಂದಾದಾರರನ್ನು ಸೇರ್ಪಡೆಯನ್ನು ಮುಂದುವರಿಸಿದೆ. ಮತ್ತಷ್ಟು 4ಜಿ ಟವರ್‌ಗಳ ಬೇಡಿಕೆಯನ್ನು ಈಡೇರಿಸಲು, ಜಿಯೋ ಕರ್ನಾಟಕ 2021ರಲ್ಲಿ ತನ್ನ 4ಜಿ ನೆಟ್‌ವರ್ಕ್ ಅನ್ನು ಶೇ 28ರಷ್ಟು ವಿಸ್ತರಿಸುತ್ತಿದೆ. ಪ್ರಸ್ತುತ ಜಿಯೋ ರಾಜ್ಯದಲ್ಲಿ 22,300ಕ್ಕಿಂತ ಹೆಚ್ಚು 4ಜಿ ನೆಟ್‌ವರ್ಕ್ ಸೈಟ್‌ಗಳನ್ನು ಹೊಂದಿದ್ದು, ಇದು ಅತಿ ದೊಡ್ಡ 4ಜಿ ಹೆಜ್ಜೆ ಗುರುತಾಗಿದೆ.

ರಿಲಯನ್ಸ್ ಜಿಯೋ, ಕಳೆದ ತರಂಗಾಂತರ ಹರಾಜಿನಲ್ಲಿ 20 ವರ್ಷಗಳ ಅವಧಿಗೆ 57,123 ಕೋಟಿ ರೂಪಾಯಿ ವೆಚ್ಚದಲ್ಲಿ 22 ವಲಯಗಳಿಗೆ ಒಟ್ಟು 488.35 MHZ (850 MHZ, 1800 MHZ ಮತ್ತು 2300 MHZ ಒಳಗೊಂಡಂತೆ) ತರಂಗಾಂತರಗಳನ್ನು ಖರೀದಿಸಿದೆ. ಇದರೊಂದಿಗೆ ಜಿಯೋ ತನ್ನ ಹೆಜ್ಜೆಗುರುತನ್ನು ಶೇ 55ರಷ್ಟು ಏರಿಕೆಯೊಂದಿಗೆ ಒಟ್ಟು 1717 MHZಗೆ ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಜಿಯೋ ಪ್ರಸ್ತುತ 443 ಮಿಲಿಯನ್ ಗ್ರಾಹಕರನ್ನು ಹೊಂದಿದೆ. ಮುಂದೆ 300 ಮಿಲಿಯನ್ ಬಳಕೆದಾರರನ್ನು ಸೇರ್ಪಡೆಗೊಳಿಸುವ ಗುರಿ ಹೊಂದಿದೆ. ಇದು ಮುಂಬರುವ 5ಜಿ ಸೇವೆಗಳ ಪರಿವರ್ತನೆಗೆ ಸಾಗಲು ಕೂಡ ನೆರವಾಗಲಿದೆ ಎಂದು ಕಂಪೆನಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next