Advertisement
ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರನೇ ಆರೋಪಿಯನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಕರಣದ ಐದನೇ ಆರೋಪಿ ರಾಜಸ್ಥಾನ ಮೂಲದ ಮೊಹಮ್ಮದ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದರು.
ಸಲ್ಮಾನ್ ಮನೆಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಆರನೇ ಆರೋಪಿಯನ್ನು ಹರ್ಯಾಣದಲ್ಲಿ ಬಂಧಿಸಿದ್ದಾರೆ. ಬಂಧಿತನ ಹೆಸರು ಹರ್ಪಾಲ್ ಸಿಂಗ್ ಎನ್ನಲಾಗಿದೆ. ಈ ಪ್ರಕರಣದಲ್ಲಿ ಪಂಜಾಬ್ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಮೊದಲು ಬಂಧಿಸಿದ್ದರು. ಆ ನಂತರ ಇಬ್ಬರು ಆರೋಪಿಗಳು ಗುಜರಾತ್‌ನ ಭುಜ್‌ನಲ್ಲಿ ಸಿಕ್ಕಿಬಿದ್ದರು. ಈಗ ರಾಜಸ್ಥಾನ ಮತ್ತು ಹರ್ಯಾಣದಿಂದ ಟಾಲಾ ಒಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಸಂಖ್ಯೆ ನೋಡುವಾಗ ಪ್ರಕರಣ ಎಷ್ಟು ದೊಡ್ಡ ಮಟ್ಟದಲ್ಲಿದೆ ಎಂಬುದನ್ನು ಗಮನಿಸಬಹುದು.
Related Articles
ಏಪ್ರಿಲ್ 14ರಂದು ಬೆಳಗ್ಗೆ ಬೈಕ್ ನಲ್ಲಿ ಬಂದ ಇಬ್ಬರು ಶೂಟರ್ ಗಳು ಸಲ್ಮಾನ್ ಮನೆ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನ ಮೇಲೆ 5 ಸುತ್ತು ಗುಂಡು ಹಾರಿಸಿದ್ದರು. ಒಂದು ಗುಂಡು ಸಲ್ಮಾನ್ ಮನೆಯ ಗೋಡೆಗೆ ತಗುಲಿದರೆ, ಇನ್ನೊಂದು ಗುಂಡು ಸಲ್ಮಾನ್ ಮನೆಯೊಳಗಿನ ಡ್ರಾಯಿಂಗ್ ರೂಮಿನ ಗೋಡೆಗೆ ಅಪ್ಪಳಿಸಿದೆ. ಗುಂಡು ಹಾರಿಸಿದ ದುಷ್ಕರ್ಮಿಗಳು ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದರು.
Advertisement
ಗುಜರಾತ್‌ನ ಭುಜ್‌ನಲ್ಲಿ ವಿಕ್ಕಿ ಗುಪ್ತಾ (24 ವರ್ಷ) ಮತ್ತು ಸಾಗರ್ ಪಾಲ್ (21 ವರ್ಷ) ಎಂಬ ಇಬ್ಬರು ಶೂಟರ್‌ಗಳನ್ನು ಪೊಲೀಸರು ಬಂಧಿಸಿದ್ದರು. ಕೆಲ ದಿನಗಳ ಹಿಂದೆ ಪಂಜಾಬ್‌ನಿಂದ ಬಂಧಿತನಾಗಿದ್ದ ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ.
ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರು ದಾಳಿಯ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Tragedy: ಭೀಕರ ರಸ್ತೆ ಅಪಘಾತ… ಒಂದೇ ಕುಟುಂಬದ 6 ಮಂದಿ ಮೃತ್ಯು, ಓರ್ವನ ಸ್ಥಿತಿ ಗಂಭೀರ