ಕೋಲ್ಕತಾ: ಪಶ್ಚಿಮಬಂಗಾಳದಲ್ಲಿ ಮತ್ತೊಬ್ಬ ರೂಪದರ್ಶಿ ಶವ ಆಕೆಯ ಮನೆಯಲ್ಲಿ ಪತ್ತೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಆತ್ಮಹತ್ಯೆಗೆ ಶರಣಾದ ನಾಲ್ಕನೇ ಪ್ರಕರನ ಇದಾಗಿದೆ ಎಂದು ಪೊಲೀಸರು ಸೋಮವಾರ (ಮೇ 30) ತಿಳಿಸಿದ್ದಾರೆ.
ಇದನ್ನೂ ಓದಿ:ಮಕ್ಕಳೆ ಭಾರತಾಂಬೆ ನಿಮ್ಮೊಂದಿಗಿದ್ದಾಳೆ… ಪಾಲಕರನ್ನು ಕಳೆದುಕೊಂಡ ಮಕ್ಕಳೊಂದಿಗೆ ಮೋದಿ ಸಂವಾದ
ರೂಪದರ್ಶಿ, ಮೇಕಪ್ ಕಲಾವಿದೆ ಸರಸ್ವತಿ ದಾಸ್ (18ವರ್ಷ) ಅವರ ಶವ ಬೆಡಿಯಾದಂಗಾದ ಕಸಬಾ ಪ್ರದೇಶದಲ್ಲಿನ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಸಣ್ಣ ಉದ್ಯಮಿಗಳಿಗೆ ರೂಪದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸರಸ್ವತಿ, ಭಾನುವಾರ ಮನೆಯ ಕೋಣೆಯಲ್ಲಿ ದುಪ್ಪಟ್ಟಾ ಬಳಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ ಎಂದು ವರದಿ ವಿವರಿಸಿದೆ.
ಇದೊಂದು ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಕಂಡುಬರುತ್ತಿದೆ. ಆದರೆ ನಾವು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸರಸ್ವತಿ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವುದನ್ನು ಮೊದಲು ಅಜ್ಜಿ ನೋಡಿದ್ದು, ಬಳಿಕ ನೆರೆಹೊರೆಯವರ ಸಹಾಯದಿಂದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು. ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.