Advertisement

ರಾಜ್ಯದಲ್ಲಿ ಮತ್ತೊಬ್ಬ ಕೋವಿಡ್ 19 ಸೋಂಕಿತ: ಚಿಕ್ಕಬಳ್ಳಾಪುರದ ವ್ಯಕ್ತಿಗೆ ಸೋಂಕು

10:57 AM Mar 22, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆಗೆ ಮತ್ತೊಂದು ಸೇರ್ಪಡೆಯಾಗಿದ್ದು, ಚಿಕ್ಕಬಳ್ಳಾಪುರದ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ.

Advertisement

ಮೆಕ್ಕಾ ಪ್ರವಾಸದಿಂದ ಹಿಂತುರಿಗಿದ್ದ ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಗೆ ಕೋವಿಡ್ 19 ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ. ಇವರನ್ನು ಈಗಾಗಲೇ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಲ್ಪಟ್ಟ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ರಾಜ್ಯದ ಆರೊಗ್ಯ ಸಚಿವ ಬಿ ಶ್ರೀರಾಮುಲು ಟ್ವೀಟ್ ಮಾಡಿದ್ದು, ಚಿಕ್ಕಬಳ್ಳಾಪುರದ ವ್ಯಕ್ತಿಗೆ ಕೋವಿಡ್ -19 ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದರೊಂದಿಗೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 16ಕ್ಕೇರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next