Advertisement

ದಾವಣಗೆರೆ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

08:07 AM May 01, 2020 | keerthan |

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ದಾವಣಗೆರೆ ನಗರದ ಜಾಲಿನಗರದ 69 ವರ್ಷದ ನಿವಾಸಿಗೆ ಸೋಂಕು ತಾಗಿರಿವುದು ದೃಢವಾಗಿದೆ.

Advertisement

69 ವರ್ಷದ ವ್ಯಕ್ತಿ ಅನಾರೋಗ್ಯದಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಏ. 28ರಂದು ದಾಖಲಾಗಿದ್ದರು. ಇವರ ಗಂಟಲು ದ್ರವ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ಗೆ ಕಳುಹಿಸಲಾಗಿತ್ತು. ಇಂದು ವರದಿ ಲಭ್ಯವಾಗಿದ್ದು ವೃದ್ಧನಿಗೆ ಕೋವಿಡ್ ಸೋಂಕು ಇರುವುದು ಖಚಿತವಾಗಿದೆ.

ವೃದ್ಧನ ಟ್ರಾವಲ್ ಹಿಸ್ಟರಿಗಾಗಿ ಜಿಲ್ಲಾಡಳಿತ ಶೋಧ ಆರಂಭಸಿದ್ದು, ವೃದ್ಧ ದಾವಣಗೆರೆ ಬಿಟ್ಟು ಬೇರೆ ಕಡೆ ಹೋಗಿಲ್ಲ ಎನ್ನಲಾಗಿದೆ.

ವೃದ್ಧನ ಕುಟುಂಬದ ಒಂದೂವರೆ ವರ್ಷದ ಒಂದು ಮಗು ಹಾಗೂ ಮೂರು ವರ್ಷದ ಇನ್ನೊಂದು ಮಗು ಸೇರಿ ಒಂಬತ್ತು ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ಗೆ ರವಾನೆ ಮಾಡಲಾಗಿದೆ.

ಜಾಲಿ ನಗರ ಸೀಲ್ ಡೌನ್ ಮಾಡಲು ಜಿಲ್ಲಾ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next