Advertisement
ಅಲ್ಲದೆ ಕಾಡುಗಳಲ್ಲಿ ಮಂಗಗಳ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ.ಜ್ವರ, ಜಾಂಡೀಸ್‌ನಿಂದ ಬಳಲುತ್ತಿದ್ದ ಕಂಚಿಕೈ ಮಂಜುನಾಥ್ (22) ಮೃತಪಟ್ಟಿದ್ದು ಇವರಿಗೆ ಮಂಗನ ಕಾಯಿಲೆ ತಗುಲಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.
ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ನಡುವೆ ಮಂಜುನಾಥ್ ತಾಯಿಯೂ ಜ್ವರದಿಂದ ಬಳಲುತ್ತಿದ್ದು
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಸ್ತುತ ಮೆಗ್ಗಾನ್‌ನಲ್ಲಿ ಶಂಕಿತ ಕೆಎಫ್‌ಡಿಯ ನಾಲ್ವರಿಗೆ ಹಾಗೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಐದು ಮಂದಿಗೆ
ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕರಾಜ್ ಅವರ ಸ್ಥಿತಿ ಗಂಭೀರವಾಗಿದೆ
ಎನ್ನಲಾಗಿದೆ. ಈ ನಡುವೆ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಅರಳಗೋಡು ಗ್ರಾ.ಪಂ.ವ್ಯಾಪ್ತಿಯ ಕಾಡಿನಲ್ಲಿ ಬುಧವಾರ ಎರಡು ಮೃತ ಮಂಗಗಳು ಪತ್ತೆಯಾಗಿದೆ. ಅಲ್ಲದೆ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶಕ್ಕೆ ಅಂಟಿಕೊಂಡಿರುವ ತುಂಬೆ ಗ್ರಾಮದಲ್ಲೂ ಮೃತ ಮಂಗನ ಶವ ಪತ್ತೆಯಾಗಿದೆ.