ಉಡುಪಿ: ಕೆಲವು ದಿನಗಳ ಹಿಂದಷ್ಟೇ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಲಾಡ್ಜ್ ನಲ್ಲಿ ಇಂದು ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆಯ ಶರಣ್ ರಾಜ್ (31 ವ) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಮೆಡಿಕಲ್ ರೆಪ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕೆಎಸ್‌ಆರ್‌ಟಿಸಿ ಸಿಬ್ಬಂದಿ ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆ
ಹೆಸರು ಬದಲಿಸಿದ ಲಾಡ್ಜ್: ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಒಂದು ರೀತಿಯ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ನ ಹೆಸರಿಗೆ ಧಕ್ಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಲಾಡ್ಜ್ ನ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಇದೀಗ ಮತ್ತೋರ್ವ ಯುವಕ ಆತ್ಮಹತ್ಯೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ:ಹೆಬ್ರಿ: ಪ್ರಿಯಕರ ಪೋನ್ ಕಾಲ್ ಸ್ವೀಕರಿಸಿಲ್ಲವೆಂದು ಮನನೊಂದು ಪ್ರಿಯತಮೆ ಆತ್ಮಹತ್ಯೆ