Advertisement

Cauvery Issue;ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ನಿತ್ಯ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚನೆ

05:00 PM Sep 18, 2023 | Team Udayavani |

ಹೊಸದಿಲ್ಲಿ: ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ಸೋಮವಾರ ನಡೆದಿದ್ದು, ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಲಾಗಿದೆ.

Advertisement

ಪ್ರತಿ ದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್​ ಸೂಚನೆ ನೀಡಿದ್ದು, ಸಮಿತಿ ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ.

ಕರ್ನಾಟಕದ ಕಾವೇರಿ ಜಲಾನಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಬರದ ತೀವ್ರತೆಯನ್ನು ಗಮನಿಸಿ, ಕುಡಿಯುವ ನೀರಿನ ಅಗತ್ಯೆಗಳು ಮತ್ತು ನೀರಿನ ಕನಿಷ್ಠ ಅಗತ್ಯೆತೆಗಳಿಗೆ ನೀರಿನ ಅಗತ್ಯ ಇರುವುದರಿಂದ ಜಲಾಶಯಗಳಿಗೆ ಒಳ ಹರಿವು ಸುಧಾರಿಸಿದ ಹೊರತು ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಕರ್ನಾಟಕವು ಮನವಿ ಸಲ್ಲಿಸಿತು.

ಇದನ್ನೂ ಓದಿ:Police Officers: ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ಪೊಲೀಸರು; ವಿಡಿಯೋ ವೈರಲ್

ಇದಕ್ಕೆ ಪ್ರತಿಯಾಗಿ ತಮಿಳುನಾಡು ಮುಂದಿನ 15 ದಿನಗಳವರೆಗೆ ಒಟ್ಟು 12,500 ಕ್ಯೂಸೆಕ್ಸ್ ನೀರನ್ನು (6500 ಕ್ಯೂಸೆಕ್ ಬಾಕಿ ಒಳಗೊಂಡಂತೆ) ಬಿಡುಗಡೆ ಮಾಡುವಂತೆ ಒತ್ತಾಯಿಸಿತು.

Advertisement

ಮುಂದಿನ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ಸೆ.26ರಂದು ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next