ಯಾದಗಿರಿ: ಜಿಲ್ಲೆಗೆ ಮಹಾರಾಷ್ಟ್ರದಿಂದ ಆಗಮಿಸಿದ ಜನರಲ್ಲಿ ಕೋವಿಡ್-19 ಸೋಂಕು ಮತ್ತೆ ಮತ್ತೆ ದೃಢವಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಗುರುವಾರ ಮತ್ತೆ ಜಿಲ್ಲೆಯ ಏಳು ಜನರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಇಂದು ಎಂಟು ವರ್ಷದ ಬಾಲಕ ಪಿ-2479, 11 ವರ್ಷದ ಬಾಲಕ ಪಿ- 2481 ಸೇರಿದಂತೆ ಏಳು ಜನರಿಗೆ ಕೋವಿಡ್-19 ಸೋಂಕು ವಕ್ಕರಿಸಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.
ಕಳೆದ ಕೆಲ ದಿನಗಳಿಂದ ಹೋಲಿಸಿದರೆ ನಿತ್ಯ ಎರಡಂಕಿಯಲ್ಲಿರುತ್ತಿದ್ದ ಸೋಂಕಿತರ ಸಂಖ್ಯೆ ಒಂದಂಕಿಗೆ ಬಂದಿದ್ದು ಜಿಲ್ಲೆಯ ಜನತೆಗೆ ಕೊಂಚ ಸಮಾಧಾನ ತಂದಿದೆ.
ಜಿಲ್ಲೆಯಲ್ಲಿ ಇನ್ನೂ 6300ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷಾ ವರದಿ ಬರಬೇಕಿದ್ದು ಕೋವಿಡ್ ಬಾಂಬ್ ದೊಡ್ಡ ಮಟ್ಟದಲ್ಲಿ ಸ್ಪೋಟಿಸಿದರೂ ಅಚ್ಚರಿಯಿಲ್ಲ ಎನ್ನಲಾಗಿದೆ.
ರಾಜ್ಯದಲ್ಲಿಂದು ಒಟ್ಟು 75 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 809 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 47 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.