Advertisement

ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌: ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ

09:46 AM Jun 01, 2022 | Team Udayavani |

ಬೆಂಗಳೂರು: ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಳಪ್ಪ ಅವರು ರಾಜೀನಾಮೆ ಪತ್ರವನ್ನು ಕಳಿಸಿದ್ದು, ವೈಯಕ್ತಿಕ ಕಾರಣಗಳಿಂದ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ರೈತರಿಗೆ ನೆರವಾದ ಸಂತೃಪ್ತಿ; ಫ‌ಲಾನುಭವಿಗಳ ಜತೆ ಸಂವಾದದಲ್ಲಿ ಪ್ರಧಾನಿ ಮೋದಿ

ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಏನಿದೆ?

ಪಕ್ಷದಲ್ಲಿ ನನಗೆ ಹಲವು ಅವಕಾಶಗಳನ್ನು ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. 2013 ರಿಂದ ನಾನು ರಾಷ್ಟ್ರೀಯ ಹಾಗೂ ವಿವಿಧ ಮಾಧ್ಯಮಗಳಲ್ಲಿ ಕಾಂಗ್ರೆಸ್ ವಕ್ತಾರನಾಗಿ ಪಕ್ಷವನ್ನು ಸಮರ್ಥನೆ ಮಾಡಿಕೊಂಡಿದ್ದೇನೆ. ಸುಮಾರು 6497 ಮಾಧ್ಯಮ ಚರ್ಚೆಗಳಲ್ಲಿ ಭಾಗಿಯಾಗಿದ್ದೇನೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ನಾನು ಈ ವಿಚಾರವಾಗಿ ನಿರಾಸಕ್ತನಾಗಿದ್ದೇನೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡುತ್ತೇನೆ. ಈ ಮೂಲಕ 1997 ರಿಂದ ಆರಂಭವಾದ ನನ್ನ ಕಾಂಗ್ರೆಸ್ ಪಕ್ಷದಲ್ಲಿನ ಪಯಣವನ್ನು ಕೊನೆಗೊಳಿಸುತ್ತೇನೆ ಎಂದು ಬ್ರಿಜೇಶ್ ಕಾಳಪ್ಪ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next