ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 197ಕ್ಕೇರಿದೆ.
ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ತಗುಲಿದ ಸೋಂಕು ತಗುಲಿದೆ. ತಾಲೂಕಿನ ಹಿರೇಬಾಗೇವಾಡಿಯ ಸೋಂಕಿತನ ತಂದೆ, ತಾಯಿ ಹಾಗೂ ಸಹೋದರನಿಗೂ ಸೋಂಕು ದೃಢವಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ವರದಿಯಾಗಿದೆ. ದೆಹಲಿ ಪ್ರಯಾಣದ ಹಿನ್ನೆಲೆ ಹೊಂದಿರುವ 27 ವರ್ಷದ ಪುರುಷರೊಬ್ಬರಲ್ಲಿ ಈ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿಯಾಗಿದ್ದು ಈತ ಕೂಡ ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಂಪರ್ಕ ಹೊಂದಿರುವ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಉಳಿದಂತೆ ಬೆಂಗಳೂರು ನಗರದ ಮೂವರಿಗೆ ಸೋಂಕು ತಾಗಿರುವುದು ಖಚಿತವಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 197 ಜನರಿಗೆ ಸೊಂಕು ದೃಢವಾಗಿದೆ. ಅವರಲ್ಲಿ 30 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರು ಜನರು ಸಾವನ್ನಪ್ಪಿದ್ದಾರೆ.