ಮಂಗಳೂರು: ಜಿಲ್ಲೆಯಲ್ಲಿ ಇಂದು ಮತ್ತೆ ಎರಡು ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದಿರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 47ಕ್ಕೇರಿಕೆಯಾಗಿದೆ.
ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ 30 ವರ್ಷದ ಗಂಡಸು ಮತ್ತು ಉಸಿರಾಟದ ಸಮಸ್ಯೆ ಎದುರಿಸುತ್ತಿರುವ 55 ವರ್ಷದ ಹೆಂಗಸಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ 30 ವರ್ಷದ ಯುವಕ ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದರು.
ಇವರಿಬ್ಬರಿಗೂ ಮಂಗಳೂರಿನ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಸೋಂಕು ಪ್ರಕರಣ ದೃಢವಾಗಿದೆ. ಇದಿರಂದ ಸೋಂಕಿತರ ಸಂಖ್ಯೆ ಒಟ್ಟು 1246ಕ್ಕೆ ಏರಿಕೆಯಾಗಿದೆ. ಇದುವರೆಗೆ 530 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 37 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾನೆ. ಆದರೆ ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.