Advertisement

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

06:10 AM Nov 22, 2018 | Team Udayavani |

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ (ನ.22) ನ.24 ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಈಗಾಗಲೇ ಅಕ್ಕಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ರಾಜ್ಯದಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೋಲಾರ,

ಚಿಕ್ಕಬಳ್ಳಾಪುರ ಸೇರಿದಂತೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜತೆಗೆ ಎರಡು ದಿನ ದಕ್ಷಿಣ ಒಳನಾಡಿನಲ್ಲಿ ಚಳಿಗಾಳಿ ಬೀಸಲಿದೆ. ಬುಧವಾರ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಉಂಟಾಗಿತ್ತು. ಕೆಲವೆಡೆ ತುಂತುರು ಮಳೆಯಾದ ವರದಿಯಾಗಿದೆ. ಇನ್ನು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ. ಬುಧವಾರ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಅತಿ ಹೆಚ್ಚು ಕೋಲಾರದಲ್ಲಿ 17 ಮಿ.ಮೀ. ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next