Advertisement

ಬೆಂಗಳೂರಿನಲ್ಲಿ ಮತ್ತೆರಡು ಸೋಂಕಿತರು ಪತ್ತೆ: 146ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

09:09 AM Apr 06, 2020 | keerthan |

ಬೆಂಗಳೂರು:ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ರವಿವಾರ ಮತ್ತಿಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ರಾಜ್ಯದ ಕೋವಿಡ್ -19 ಸೋಂಕಿತರ ಸಂಖ್ಯೆ 146ಕ್ಕೇರಿದೆ.

Advertisement

ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿಯಂತೆ ಬೆಂಗಳೂರಿನ ಮಡಿವಾಳದ ಇಬ್ಬರಿಗೆ ಸೋಂಕು ದೃಢವಾಗಿದೆ. ನಗರದ ಮಡಿವಾಳದ ದಂಪತಿಗೆ ಕೋವಿಡ್-19 ಸೋಂಕು ದೃಢವಾಗಿದೆ.

68 ವರ್ಷದ ಪತಿ ಮತ್ತು 62 ವರ್ಷದ ಪತ್ನಿ ಇತ್ತೀಚೆಗೆ ದುಬೈನಿಂದ ಆಗಮಿಸಿದ್ದರು. ಇವರಿಬ್ಬರು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು.

ರಾಜ್ಯದಲ್ಲಿ ಇದುವರೆಗೆ 146 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 11 ಜನರು ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು 57 ಜನ ಸೋಂಕಿತರಿದ್ದು, ಮೈಸೂರಿನಲ್ಲಿ 28 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

Advertisement

ಶನಿವಾರ ರಾಜ್ಯದಲ್ಲಿ 16 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next