Advertisement

ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಎರಡು ದಿನದಲ್ಲಿ ನಾಲ್ಕನೇ ಸಾವು

02:12 PM Jun 29, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಭೀತಿ ಆಘಾತಕಾರಿಯಲ್ಲಿ ರೀತಿಯಲ್ಲಿ ಹಬ್ಬುತ್ತಿದೆ. ಜಿಲ್ಲೆಯಲ್ಲಿ ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

Advertisement

ಜಿಲ್ಲೆಯಲ್ಲಿ ಇಂದು ಕೋವಿಡ್-19 ಸೋಂಕಿನ ಕಾರಣದಿಂದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡು ದಿನದಲ್ಲಿ ಜಿಲ್ಲೆಯಲ್ಲಿ ದಾಖಲಾದ ನಾಲ್ಕನೇ ಕೋವಿಡ್-19 ಸಾವು ಪ್ರಕರಣವಾಗಿದೆ.

ಮಂಗಳೂರಿನ ಉಳ್ಳಾಲದ 60 ವರ್ಷದ ವೃದ್ದೆ ಇಂದು ಸಾವನ್ನಪ್ಪಿದ್ದಾರೆ. ಕೋವಿಡ್-19 ಸೋಂಕು ತಾಗಿದ್ದ ಈಕೆ ಲಿವರ್, ಡಯಾಬಿಟಿಸ್ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ರವಿವಾರ ಒಂದೇ ದಿನ ಮೂವರನ್ನು ಬಲಿ ಪಡೆದಿದ್ದ ಕೋವಿಡ್-19 ಸೋಂಕು ಇಂದು ಬೆಳಿಗ್ಗೆ ಮತ್ತೆ ತನ್ನ ಬೇಟೆ ಆರಂಭಿಸಿದೆ. ಇದರಿಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 12 ಮಂದಿ ಸೋಂಕಿನ ಕಾರಣದಿಂದ ಮೃತಪಟ್ಟರೆ, ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ 97 ಜನರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 665ಕ್ಕೆ ಎರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next