Advertisement

Shimoga; ಮುಂದುವರಿದ ಡೆಂಗ್ಯೂ ಹಾವಳಿ; ಹೊಸನಗರದ ಮಹಿಳೆ ಸಾವು

06:06 PM Jul 09, 2024 | keerthan |

ಶಿವಮೊಗ್ಗ: ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮುಂದುವರಿದಿದ್ದು, ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Advertisement

ಹೊಸನಗರ ಮೂಲದ ಮಹಿಳೆ ಶಂಕಿತ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮಲೆನಾಡು ಶಿವಮೊಗ್ಗದಲ್ಲಿ ಡೆಂಗ್ಯೂ ಎರಡನೇ ಬಲಿ ತೆಗೆದುಕೊಂಡಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಶ್ಮಿ ನಾಯ್ಕ (42) ಎನ್ನುವ ಮಹಿಳೆ ಮೃತಪಟ್ಟಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಮಂಗಳವಾರ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next