Advertisement
ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕುತ್ತಿದ್ದೀರಾ? ಎಂದು ಪ್ರಶ್ನಿಸಿದರು.
ಗೂಳಿಹಟ್ಟಿ ಶೇಖರ್ ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರದ ಮೂಲಕ ನಿರ್ದಿಷ್ಟ ಪ್ರಕರಣವಿದ್ದರೆ ನೀಡಿ. ತನಿಖೆ ಮಾಡುತ್ತೇವೆಂದು ಕೇಳುತ್ತಿದ್ದೇವೆ. ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇನೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದರೂ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವು ಎಂದು ಸ್ಪಷ್ಟಪಡಿಸಿದರು. ನಾವು ಅಧಿಕಾರಕ್ಕೆ ಬಂದ ಅನಂತರ ಟೆಂಡರ್ ಪರಿಶೀಲನ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ ದೂರು ನೀಡಬಹುದಾಗಿದೆ ಎಂದು ಸವಾಲು ಹಾಕಿದರು.
Related Articles
ಡಿ.ಕೆ. ಶಿವಕುಮಾರ್ ನೀರಾವರಿ ಸಚಿವರಿ¨ªಾಗ ಟೆಂಡರ್ ಪರಿಶೀಲನ ಸಮಿತಿಯನ್ನು ರದ್ದು ಮಾಡಿದ್ದರು. ಟಿಎಸಿಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ಸ್ಥಗಿತಗೊಳಿಸಿದ ಕೀರ್ತಿ ಅವರಿಗೇ ಸಲ್ಲಬೇಕು. ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಟ್ಟಿದ್ದೇ ಶಿವಕುಮಾರ್. ನಾವು ಬಂದ ಅನಂತರ ಅದನ್ನು ಪುನಃ ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಟೀಕಿಸಿದರು.
Advertisement