Advertisement

ಪಕ್ಷದ ನೋಟಿಸ್‌ಗೆ ಉತ್ತರಿಸುವೆ

12:21 PM Oct 03, 2018 | Team Udayavani |

ಬೆಂಗಳೂರು: ಮೆಕ್ಕಾ ಪ್ರವಾಸ ಕೈಗೊಂಡಿದ್ದ ಕಾರಣ ಬಿಬಿಎಂಪಿ ಮೇಯರ್‌, ಉಪಮೇಯರ್‌ ಚುನಾವಣೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಮಾಜಿ ಸಚಿವ ರೋಷನ್‌ ಬೇಗ್‌ ಹೇಳಿದ್ದಾರೆ. 

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಕಾರಣ ಕೇಳಿ ಕೆಪಿಸಿಸಿಯಿಂದ ನೋಟಿಸ್‌ ಬಂದಿದ್ದು, ಅದಕ್ಕೆ ಉತ್ತರ ನೀಡುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಮೊದಲೇ ನಿರ್ಧರಿಸಿದ ಕಾರ್ಯಕ್ರಮ ಆಗಿದ್ದರಿಂದ ಮೆಕ್ಕಾದಿಂದ ತಕ್ಷಣ ವಾಪಸ್‌ ಬರಲು ಆಗಲಿಲ್ಲ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಮೇಯರ್‌, ಉಪ ಮೇಯರ್‌ ಚುನಾವಣೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಪಕ್ಷದ ಹಿರಿಯರು ಸೂಚಿಸಿದ್ದರೂ ರೋಷನ್‌ಬೇಗ್‌ ಹಾಗೂ ಇಬ್ಬರು ಕಾಂಗ್ರೆಸ್‌ ಕಾರ್ಪೊರೇಟರ್‌ಗಳು ಗೈರು ಹಾಜರಾಗಿದ್ದರು. ಉದ್ದೇಶಪೂರ್ವಕವಾಗಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿರಲಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೆಪಿಸಿಸಿ, ನೋಟಿಸ್‌ ಜಾರಿ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next