Advertisement

Lok Sabha ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತರ: ವಿಜಯೇಂದ್ರ

09:55 PM Feb 27, 2024 | Team Udayavani |

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಉಂಟಾದ ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಫ‌ಲಿತಾಂಶದ ಬಳಿಕ ಪಕ್ಷದ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ್‌ ಸಾ ಭಾಂಡಗೆ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿ, ಆಡಳಿತ ಪಕ್ಷದ ಶಾಸಕರು ಸರ್ಕಾರದ ವಿರುದ್ಧ ವ್ಯಕ್ತಪಡಿಸುತ್ತಿದ್ದ ಅಸಮಾಧಾನ, ಕ್ಷೇತ್ರದಲ್ಲಿ ವ್ಯಕ್ತವಾಗುತ್ತಿದ್ದ ವಿರೋಧ ಆಧರಿಸಿ ಮೈತ್ರಿ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ಅವರಿಗೆ ಗೆಲುವಾಗುತ್ತದೆ ಎಂಬ ನಿರೀಕ್ಷೆ ಇತ್ತು ಎಂದು ಹೇಳಿದರು.

ನಮಗೆ ಹಿನ್ನಡೆಯಾಗಿದೆ ನಿಜ. ಆದರೆ ಇದನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಎಸ್‌.ಟಿ.ಸೋಮಶೇಖರ್‌ ಹಾಗೂ ಶಿವರಾಮ ಹೆಬ್ಬಾರ್‌ ವಿರುದ್ಧ ಖಂಡಿತವಾಗಿಯೂ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ವರಿಷ್ಠರ ಜತೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಕಾನೂನು ತಜ್ಞರ ಜತೆಗೂ ಮಾತುಕತೆ ನಡೆಸಲಾಗಿದೆ. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next