Advertisement

ಬಿಜೆಪಿ ವಿರೋಧಿ ರಂಗ ಸಾಧ್ಯತೆ : ಪವಾರ್‌ ಭೇಟಿಯಾದ ರಾಹುಲ್‌

11:36 AM Mar 15, 2018 | Team Udayavani |

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ವಿರೋಧಿ ರಂಗವನ್ನು ರೂಪಿಸುವ ನಿಟ್ಟಿನಲ್ಲಿ ಸಮಾನ ಮನಸ್ಕ ನಾಯಕರನ್ನು ತಲುಪುವ ಯತ್ನವಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು, ಅವರ ನಿವಾಸದಲ್ಲೇ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

Advertisement

ರಾಹುಲ್‌ ಗಾಂಧಿ ಈಗಿನ್ನು ಈ ವಿಷಯದಲ್ಲಿ ಇದೇ ಮಾರ್ಚ್‌ 28ರಂದು ದಿಲ್ಲಿಗೆ ಭೇಟಿ ನೀಡಲಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲಿದ್ದಾರೆ. 2019ರ ಮಹಾ ಚುನಾವಣೆಯಲ್ಲಿ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಬಲಿಷ್ಠವಾದ ಮೈತ್ರಿಕೂಟವನ್ನು ರಚಿಸುವ ಅಗತ್ಯವಿದೆ ಎಂಬುದನ್ನು ರಾಹುಲ್‌, ಮಮತಾ ಬ್ಯಾನರ್ಜಿಗೆ ಮನವರಿಕೆ ಮಾಡಲಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಇದೇ ವಿಷಯಕ್ಕೆ ಸಂಬಂಧಿಸಿ ವಿರೋಧ ಪಕ್ಷಗಳ ನಾಯಕರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ದಿಲ್ಲಿಯಲ್ಲಿ ಮೈತ್ರಿ ಭೋಜನ ಕೂಟವನ್ನು ಏರ್ಪಡಿಸಿದ್ದರು. ಅದರಲ್ಲಿ 20 ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.

ಉತ್ತರ ಪ್ರದೇಶದ ಎರಡು ನಿರ್ಣಾಯಕ ಸಂಸದೀಯ ಕ್ಷೇತ್ರಗಳಾದ ಗೋರಖ್‌ಪುರ ಮತ್ತು ಫ‌ೂಲ್‌ಪುರ ಉಪಚುನಾವಣೆಯಲ್ಲಿ  ಬಿಜೆಪಿಯನ್ನು ಸೋಲಿಸುವಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟಕ್ಕೆ ಸಾಧ್ಯವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಮಹಾ ಚುನಾವಣೆಗೆ ಬಿಜೆಪಿ ವಿರೋಧಿ ಬಲಿಷ್ಠ ಮೈತ್ರಿ ರಂಗವನ್ನು ರೂಪಿಸುವುದು ಈಗ ಬಹುತೇಕ ಖಚಿತವಾಗಿರುವಂತಿದೆ ಎನ್ನಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next