Advertisement

ಜಾಮಿಯಾ ವಿವಿ ಹಿಂಸಾಚಾರ: ಕಾಂಗ್ರೆಸ್ ಮಾಜಿ ಶಾಸಕರ ವಿರುದ್ಧ ಎಫ್ಐಆರ್ ದಾಖಲು

09:43 AM Dec 19, 2019 | Mithun PG |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರದಂದು (ಡಿ. 15) ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿತ್ತು. ಇದೀಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದು ಜನರನ್ನು ಪ್ರಚೋದಿಸಿದ ಮತ್ತು ಕಲ್ಲು ತೂರಾಟ  ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನ ಮಾಜಿ ಶಾಸಕ ಆಸಿಫ್ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಓಖ್ಲಾ ಮಾಜಿ ಕಾಂಗ್ರೆಸ್ ಶಾಸಕ ಆಸಿಫ್ ಜೊತೆಗೆ ಇತರ ಆರು ಜನರ ಹೆಸರು ಕೂಡ ತಳಕು ಹಾಕಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪ್ರಕರಣದಲ್ಲಿ ಇತರ ಆರೋಪಿಗಳೆಂದರೆ ಸ್ಥಳೀಯ ರಾಜಕಾರಣಿಗಳಾದ ಆಶು ಖಾನ್, ಮುಸ್ತಾಫಾ ಮತ್ತು ಹೈದರ್, ಎಐಎಸ್ಎ ಸದಸ್ಯ ಚಂದನ್ ಕುಮಾರ್, ಎಸ್ಐಒ ಸದಸ್ಯ ಆಸಿಫ್ ತನ್ಹಾ ಮತ್ತು ಸಿವೈಎಸ್ಎಸ್ ಸದಸ್ಯ ಕಾಸಿಮ್ ಉಸ್ಮೈನ್.

ಡಿಸೆಂಬರ್ 15 ರ ಭಾನುವಾರದಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು  ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಅಪಾರ  ಸಾರ್ವಜನಿಕ ಆಸ್ತಿಪಾಸ್ತಿಗಳು  ನಷ್ಟವಾಗಿದ್ದವು.

ಈ ಕುರಿತು ಸ್ಪಷ್ಟನೆ ನೀಡಿದ ಕಾಂಗ್ರೆಸ್ ನ ಮಾಜಿ ಶಾಸಕ ಆಸಿಫ್ ಖಾನ್, ನಾವು ದಂಗೆಕೋರರಲ್ಲ. ಕಾನೂನಿನ ವ್ಯಾಪ್ತಿಯನ್ನು ಮೀರಿ ವರ್ತಿಸಿಲ್ಲ.  ಶಾಂತಿಯುತ ಪ್ರತಿಭಟನೆಯಲ್ಲಿ ಮಾತ್ರ ಭಾಗಿಯಾಗಿದ್ದೇವು. ಎಂದು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next