Advertisement

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

12:01 AM Sep 28, 2024 | Team Udayavani |

ಚಂಡೀಗಢ: ಹರಿಯಾಣದಲ್ಲಿ ವಿಧಾನಸಭಾ ಚುನಾ ವಣೆ ಸಮೀಪಿಸುತ್ತಿರುವಂತೆಯೇ ಪ್ರದೇಶ ಕಾಂಗ್ರೆಸ್‌ ಸಮಿತಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 13 ಮಂದಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾ ಟಿಸಿದೆ. ಅಧಿಕೃತ ಅಭ್ಯರ್ಥಿಗಳ ವಿರುದ್ಧ ಉಚ್ಚಾಟನೆಗೊಂಡ ನಾಯಕರು ಕೆಲಸ ಮಾಡಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ. ಅ.5ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಭಾರೀ ಆಕ್ರೋಶ ಉಂಟಾಗಿತ್ತು. ನಾಯಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ವರಿಷ್ಠರು ನಡೆಸಿದ ಪ್ರಯತ್ನಗಳು ಕೈಗೂಡಿಲ್ಲ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ನಾಯಕರು ನಡೆಸಿದ ಸಂಧಾನ ಸೂತ್ರ ಯಶಸ್ವಿಯಾಗಿದೆ. ಕೆಲವೆಡೆ ಸಿಡಿದು ನಿಂತ ನಾಯಕರು ಉಮೇದುವಾರಿಕೆ ಹಿಂಪಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next