Advertisement

ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗೆ ಅನುಮೋದನೆ-ಬಿಜೆಪಿ ಕಾರ್ಯಕರ್ತರಿಂದ ಗೋಪೂಜೆ

09:30 PM Dec 10, 2020 | mahesh |

ಚಿಕ್ಕಬಳ್ಳಾಪುರ: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕ 2020, ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಟೌನ್ ಹಾಲ್ ಬಳಿ ಶ್ರೀ ಗಂಗಾಧರೇಶ್ವರ ದೇವಾಲಯದಲ್ಲಿ ಗೋಪೂಜೆ ನೆರವೇರಿಸಲಾಯಿತು.

Advertisement

ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹಿಂದೂಗಳಿಗೆ ಪವಿತ್ರವಾಗಿರುವ ಗೋವುಗಳನ್ನು ಸಂರಕ್ಷಣೆ ಮಾಡಲು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹತ್ಯೆ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳುವ ಜೊತೆಗೆ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನಗಳಿಗೆ ನೀಡಿದ್ದ ವಾಗ್ದಾನವನ್ನು ಈಡೇರಿಸಿದೆ ಅದಕ್ಕೆ ಸಿಎಂ ಯಡಿಯೂರಪ್ಪ,ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ಮತ್ತು ಸಚಿವ ಸಂಪುಟದ ಎಲ್ಲಾ ಸದಸ್ಯರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಕಾರ್ಯದರ್ಶಿ ಅಶೋಕ್, ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮಿಪತಿ, ನಗರ ಅಧ್ಯಕ್ಷ ಶ್ರೀನಿವಾಸ್, ತಾಲೂಕು ಅಧ್ಯಕ್ಷ ಕೃಷ್ಣಾರೆಡ್ಡಿ,ಮುಖಂಡರಾದ ನರಸಪ್ಪ, ಲಕ್ಷ್ಮೀನಾರಾಯಣ ಗುಪ್ತಾ, ಬೈರೇಗೌಡರು, ನಗರಸಭಾ ಸದಸ್ಯ ಯತೀಶ್ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next