ಕಾರ್ಕಳ: ಮಂಜುನಾಥ ಪೈ ಸರಕಾರಿ ಕಾಲೇಜಿನ ಎನ್ನೆಸ್ಸೆಸ್ ಹಾಗೂ ರೆಡ್ ಕ್ರಾಸ್ ಘಟಕಗಳು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವುಗಳ ಸಂಯುಕ್ತ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಇತ್ತೀಚೆಗೆ ನಡೆಸಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್‌ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿಯ ಅಧ್ಯಕ್ಷ ಉದಯ ಎಸ್. ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಾಗರೂಕರಾಗಿ, ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರೇಮಾನಂದ ಅವರು, ಸೊಳ್ಳೆಗಳಿಂದ ಬರುವ ಮಲೇರಿಯಾ , ಆನೆಕಾಲು ರೋಗ, ಮೆದುಳು ಜ್ವರ, ಡೆಂಗ್ಯೂ ಹಾಗೂ ಚಿಕನ್ ಗುನ್ಯ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ| ಶ್ರೀವರ್ಮ ಅಜ್ರಿ ಎಂ. ಮಾತನಾಡಿ, ವಿದ್ಯಾರ್ಥಿಗಳು ಇಂತಹ ಮಾಹಿತಿಗಳನ್ನು ಜನರಿಗೆ ತಿಳಿಸಿ ಮಲೇರಿಯಾವನ್ನು ನಿರ್ಮೂಲನೆ ಮಾಡುವ ಕ್ರಮ ಕೈಗೊಳ್ಳಬೇಕು ಎಂದರು.
ಯೋಜನಾಧಿಕಾರಿ ನವೀನ್, ರೆಡ್ ಕ್ರಾಸ್ ಘಟಕದ ಸಂಚಾಲಕ ವೆಂಕಟೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್. ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ವೈದ್ಯೆàತರ ಮೇಲ್ವಿಚಾರಕ ಸುರೇಶ್ ಶೆಟ್ಟಿ, ಸ್ವಾಗತಿಸಿ, ಪ್ರಾಧ್ಯಾಪಕ ಯೋಗೇಶ್ ಡಿ.ಎಚ್. ಕಾರ್ಯಕ್ರಮ ನಿರೂಪಿಸಿ, ಹಿರಿಯ ಆರೋಗ್ಯ ಸಹಾ ಯಕ ಶಿವರಾಂ ರಾವ್ ವಂದಿಸಿದರು.