Advertisement

ಇಂದು ಜನಮತ ವಿರೋಧಿ ದಿನಾಚರಣೆ 

06:00 AM May 23, 2018 | Team Udayavani |

ಬೆಂಗಳೂರು: ರಾಜ್ಯದ ಜನರಿಂದ ತಿರಸ್ಕೃತಗೊಂಡ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿವೆ ಎಂದು ಆರೋಪಿಸಿರುವ ಬಿಜೆಪಿ, ಎಚ್‌.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕರಿಸುವ ಬುಧವಾರ ರಾಜ್ಯಾದ್ಯಂತ ಜನಮತ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.

Advertisement

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಅಪವಿತ್ರ ಮೈತ್ರಿ ಸರ್ಕಾರ ರಚನೆ ವಿರುದಟಛಿ ಬುಧವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಿದ್ದಾರೆ. ಬೆಂಗಳೂರಿನ ಮೌರ್ಯ ಹೋಟೆಲ್‌ ಎದುರಿನ ಗಾಂಧಿ ಪ್ರತಿಮೆ ಎದುರು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.

ಜೆಡಿಎಸ್‌ಗೆ ಸಂಪೂರ್ಣ ಬಹುಮತ ಬಂದಿದ್ದರೆ ರೈತರ ಸಾಲಮನ್ನಾ ಮಾಡುತ್ತಿದ್ದೆ ಎಂಬುದಾಗಿ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. ಆ ಮೂಲಕ ಜೆಡಿಎಸ್‌ಗೆ ಜನಾದೇಶ ದೊರೆತಿಲ್ಲ ಎಂಬುದನ್ನು ಅವರೇ ಒಪ್ಪಿಕೊಂ ಡಂತಾಗಿದೆ. ಜೆಡಿಎಸ್‌ ಅಧಿಕಾರಕ್ಕೆ 
ಬಂದರೆ ಲೋಕಾಯುಕ್ತ ಬಲಪಡಿಸಿ ಹಗರಣ ನಡೆಸಿದವರನ್ನು ಜೈಲಿಗೆ ಕಳುಹಿ ಸುವುದಾಗಿ ಹೇಳಿದ್ದ ಕುಮಾರಸ್ವಾಮಿ ಈಗ ಮೌನ ವಹಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್‌ ಪಕ್ಷವು 122 ಸ್ಥಾನದಿಂದ 78ಕ್ಕೆ ಕುಸಿದಿದ್ದರೆ, ಜೆಡಿಎಸ್‌ ಸ್ಥಾನಗಳು 40 ಸ್ಥಾನಗಳಿಂದ 38ಕ್ಕೆ ಇಳಿಕೆಯಾಗಿದ್ದರೂ ಸಂಭ್ರಮಾಚರಣೆಯಲ್ಲಿ ತೊಡಗಿವೆ. ಒಟ್ಟು 119 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದರೂ ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿಯುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂಬ ಏಕೈಕ ಉದ್ದೇಶದಿಂದ ರಚನೆಯಾಗಿರುವ ಮೈತ್ರಿ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದರು.

ಬುಧವಾರ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಯಾವುದೇ ನಾಯಕರು ಪಾಲ್ಗೊಳ್ಳು ವುದಿಲ್ಲ. ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಬಿಜೆಪಿ ಪರಾಜಿತ ಅಭ್ಯರ್ಥಿಗಳ ಸಭೆಯನ್ನೂ ಮುಂದೂಡಲಾಗಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ತೇಜಸ್ವಿನಿ ಗೌಡ, ಸಹ ವಕ್ತಾರರಾದ ಎಸ್‌.ಪ್ರಕಾಶ್‌, ಅನ್ವರ್‌ ಮಾಣಿಪ್ಪಾಡಿ ಉಪಸ್ಥಿತರಿದ್ದರು.

Advertisement

ಬಿಎಸ್‌ವೈ, ಶ್ರೀರಾಮುಲು ರಾಜೀನಾಮೆ ಅಂಗೀಕಾರ
ನವದೆಹಲಿ: ವಿಧಾನಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಿ.ಶ್ರೀರಾಮುಲು ಅವರು ಲೋಕಸಭಾ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಮಂಗಳವಾರ ಅಂಗೀಕರಿಸಿದ್ದಾರೆ. ಯಡಿಯೂರಪ್ಪ ಅವರು ಶಿವಮೊಗ್ಗ ಮತ್ತು ಶ್ರೀರಾಮುಲು ಅವರು ಬಳ್ಳಾರಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 

ಅಪವಿತ್ರ ಮೈತ್ರಿಯೊಂದಿಗೆ, ರೈತರ ಸಾಲಮನ್ನಾ ಮಾಡದ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೆ ತೃತೀಯ ರಂಗದ ನಾಯಕರು ಆಗಮಿಸುತ್ತಿದ್ದಾರೆ. ಹಾಗಿದ್ದರೆ, ತಾವು ಕೂಡ ರೈತರ ವಿರೋಧಿಗಳಾ ಎಂಬುದನ್ನು ಈ ಎಲ್ಲಾ ನಾಯಕರು ಸ್ಪಷ್ಟಪಡಿಸಬೇಕು.
● ಕೆ.ಎಸ್‌.ಈಶ್ವರಪ್ಪ, ಬಿಜೆಪಿ ಶಾಸಕ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಬಹಳ ದಿನ ಉಳಿಯದು. ಇದು ಸಂಪೂರ್ಣ ಸ್ವಾರ್ಥದಿಂದ ಕೂಡಿರುವ ಅಪವಿತ್ರ ಮೈತ್ರಿ. ಈ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೂ ಬಹಳ ಒಳ್ಳೆಯದಾಗುತ್ತದೆನ್ನುವ ಭರವಸೆ ಇಲ್ಲ. ಕರ್ನಾಟಕದ ಜನತೆ ಬಯಸಿದ್ದು ಬಿಜೆಪಿ ಸರ್ಕಾರವನ್ನು.
● ಸಾಧ್ವಿ ನಿರಂಜನ್‌ ಜ್ಯೋತಿ, ಕೇಂದ್ರ ಸಚಿವೆ

Advertisement

Udayavani is now on Telegram. Click here to join our channel and stay updated with the latest news.

Next