Advertisement

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

10:25 PM May 02, 2024 | Suhan S |

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಶೇಷ ತನಿಖಾ ತಂಡ(ಎಸ್‌ಐಟಿ) ಮತ್ತು ಪ್ರಕರಣದ ವಿಶೇಷ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ನೋಟಿಸ್‌ ಜಾರಿ ಮಾಡಿದೆ. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

Advertisement

ಬಂಧನ ಭೀತಿ ಎದುರಿಸುತ್ತಿದ್ದ ಆರೋಪಿ ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಎಫ್ಐಆರ್‌ನಲ್ಲಿ ಜಾಮೀನು ನೀಡಬಹುದಾದ ಆರೋಪಗಳಿವೆ. ನೀವು ಪ್ರಕರಣದ ವಿಚಾರಣಾ ನ್ಯಾಯಾಲಯದಲ್ಲೇ ನೇರವಾಗಿ ಅರ್ಜಿ ಸಲ್ಲಿಸಬಹುದಿತ್ತಲ್ಲವೇ? ಎಂದು ಆರೋಪಿ ಪರ ಹಿರಿಯ ವಕೀಲ ಮೂರ್ತಿ ಡಿ.ನಾಯ್ಕ ಅವರಿಗೆ ಪ್ರಶ್ನಿಸಿತು.

ಅದಕ್ಕೆ ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು, ಎಫ್‌ಐಆರ್‌ನಲ್ಲಿ ಜಾಮೀನು ನೀಡಬಹುದಾದ ಆರೋಪಗಳಿವೆ. ಆದರೆ, ಮ್ಯಾಜಿಸ್ಟ್ರೇಟ್‌ಗೆ ಅತ್ಯಾಚಾರ ಆರೋಪ ಸೇರಿಸಲು ಎಸ್‌ಐಟಿ ಮನವಿ ಮಾಡಿದೆ. ಅದಕ್ಕೆ ಪೂರಕವಾಗಿ ಎಚ್‌.ಡಿ.ರೇವಣ್ಣ ದಾಖಲೆ ಸಲ್ಲಿಸಿದ್ದಾರೆ. ಆದರೆ, ಎಸ್‌ಐಟಿ ಸಲ್ಲಿಸಿದ ಅರ್ಜಿಯ ಸಂಪೂರ್ಣ ವಿವರ ಇನ್ನೂ ಲಭ್ಯವಿಲ್ಲ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು.

ಅವರ ವಾದ ಆಲಿಸಿದ ಕೋರ್ಟ್‌, ಈ ಸಂಬಂಧ ಎಸ್‌ಐಟಿ ಮತ್ತು ಪ್ರಕರಣದ ವಿಶೇಷ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ನೋಟಿಸ್‌ ಜಾರಿ ಆದೇಶಿಸಿದೆ. ಜತೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next