Advertisement

ಮಾಡಾಳ್ ಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

01:11 PM Mar 07, 2023 | Team Udayavani |

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆ ಮರೆಸಿ ಕೊಂಡಿರುವ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Advertisement

ಕೋರ್ಟ್ ಆದೇಶದ ಪ್ರತಿ ಕೈಗೆ ಸಿಕ್ಕ 48 ಗಂಟೆಯೊಳಗೆ ವಿಚಾರಣಾಧಿಕಾರಿ ಮುಂದೆ ಶರಣಾಗಿ ಜಾಮೀನು ಪ್ರಕ್ರಿಯೆ ಮುಗಿಸಿಕೊಳ್ಳಬೇಕು. ಜಾಮೀನಿಗೆ 5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣೆಗೆ ಸಹಕರಿಸಬೇಕು. ಸಾಕ್ಷ್ಯ ನಾಶ ಅಥವಾ ಸಾಕ್ಷಿಗಳನ್ನು ಬೆದರಿಸುವ ಕೆಲಸ ಮಾಡಬಾರದು ಎಂದು ಷರತ್ತುಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ:ಹನುಮಂತನ ಕಟೌಟ್ ಮುಂದೆ ಬಿಕಿನಿ ತೊಟ್ಟು ಪೋಸ್: ವಿವಾದಕ್ಕೆ ತಿರುಗಿದ ದೇಹದಾರ್ಢ್ಯ ಸ್ಪರ್ಧೆ

ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next