“ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣತಮತಿಗಳ್’ಎಂದು ಕವಿರಾಜ ಮಾರ್ಗ ದಲ್ಲಿ ಕನ್ನಡಿಗರನ್ನು ಬಣ್ಣಿಸಲಾಗಿದೆ. ಆ ಮಾತನ್ನು ತಮ್ಮ ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕನ್ನಡ- ಸಂಸ್ಕೃತಿಯನ್ನು ಮತ್ತೆ ಪ್ರತಿಷ್ಠಾಪನೆ ಮಾಡುವ ಪಣತೊಟ್ಟಿದ್ದಾರೆ.
ಇದರ ಭಾಗವಾಗಿಯೇ 12ನೇ ಶತಮಾನದ ಬಸವಾದಿ ಶರಣರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿ ಯಿಂದ ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ “ಅನುಭವ ಮಂಟಪ’ ನಿರ್ಮಿಸಲು ತೀರ್ಮಾನಿಸಿದ್ದಾರೆ. ಇದಕ್ಕಾಗಿ 2020-21ನೇ ಸಾಲಿನಲ್ಲಿ 100 ಕೋಟಿ ರೂ.ಗಳ ಅನುದಾನವನ್ನು ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಹಾಗೆಯೇ, ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ “ಕಂಚಿನ ಪುತ್ಥಳಿ’ ನಿರ್ಮಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ಕಾಗಿ 20 ಕೋಟಿ ರೂ.ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ. ವಿಶ್ವಕರ್ಮ ಸಮು ದಾಯದ ಬಹುದಿನದ ಬೇಡಿಕೆಯಾದ ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಪ್ರತಿವರ್ಷ ಜನವರಿ 1ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದಿದ್ದಾರೆ.
ಭೈರಪ್ಪ ಹುಟ್ಟೂರು ಅಭಿವೃದ್ಧಿಗೆ 5 ಕೋಟಿ: ಕನ್ನಡ ಸಾಹಿತ್ಯ ಪರಂಪರೆಯ ಬೆಳವಣಿಗೆಗೆ ಅಸಂಖ್ಯ ಕವಿಗಳು, ಸಾಹಿತಿಗಳು ಕೊಡುಗೆ ನೀಡಿ ದ್ದಾರೆ. ಅವುಗಳನ್ನು ನೆನೆಯುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಯಲ್ಲಿ ಕನ್ನಡದ ಹಿರಿಯ ಕಾದಂಬ ರಿಕಾರ ಎಸ್.ಎಲ್.ಭೈರಪ್ಪ ಅವರ ಹುಟ್ಟೂ ರಾದ ಹಾಸನ ಜಿಲ್ಲೆ ಸಂತೆಶಿವರ ಗ್ರಾಮದ ಅಭಿವೃದ್ಧಿಗಾಗಿ 5 ಕೋಟಿ ರೂ.ಮೀಸಲಿಡಲಾಗಿದೆ.
ಹಾಗೆಯೇ, ಲಂಬಾಣಿ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಿ ಅದನ್ನು ಮುಂ ದಿನ ಪೀಳಿಗೆಗೆ ಪರಿ ಚಯಿಸಲು ಲಂಬಾಣಿ ಸಂಸ್ಕೃತಿ ಭಾಷಾ ಅಕಾ ಡೆಮಿ ಸ್ಥಾಪನೆಗೆ 50 ಲಕ್ಷ ರೂ.ಘೋಷಿಸ ಲಾಗಿದೆ.ಕನ್ನಡ ಸಾಹಿತ್ಯ ಸಿರಿಯನ್ನು ಮುಂದಿನ ಪೀಳಿಗೆಗೆ ಪರಿಚಯಿ ಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ “ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ’ದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗಾಗಿ ಪ್ರೋತ್ಸಾಹ ಧನ ನೀಡಲಿದೆ.