Advertisement

ಮೊದಲ ಮಗುವಿನ ನಿರೀಕ್ಷೆಯಲ್ಲಿ ವಿರಾಟ್- ಅನುಷ್ಕಾ ದಂಪತಿ: ‘ಗುಡ್ ನ್ಯೂಸ್’ ನೀಡಿದ ಕೊಹ್ಲಿ

03:05 PM Aug 27, 2020 | keerthan |

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂದೆಯಾಗುತ್ತಿದ್ದಾರಂತೆ. ಹೌದು ಸ್ವತಃ ವಿರಾಟ್ ಕೊಹ್ಲಿಯೇ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ನಾವಿಬ್ಬರು ಮೂವರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement

2017ರ ಡಿಸೆಂಬರ್ 11ರಂದು ವಿವಾಹವಾದ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ 2021ರ ಜನವರಿ ವೇಳೆಯಲ್ಲಿ ಮೊದಲ ಮಗುವನ್ನು ಎದುರು ನೋಡುತ್ತಿದ್ದಾರೆ. ಈ ಮೂಲಕ ಈ ವರ್ಷ ಮತ್ತೊಂದು ಸ್ಟಾರ್ ಜೋಡಿ ‘ಗುಡ್ ನ್ಯೂಸ್’ ನೀಡಿದ್ದಾರೆ.

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್ ವಿರಾಟ್ ಕೊಹ್ಲಿ ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಯ ಬಗ್ಗೆ ಮೊದ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಗುಸುಗುಸು ಆರಂಭವಾಗಿತ್ತು. ನಂತರ ಟೀಂ ಇಂಡಿಯಾ ಪಂದ್ಯಗಳಲ್ಲಿ ಅನುಷ್ಕಾ ಕಾಣಿಸಿಕೊಳ್ಳುವ ಮೂಲಕ ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿತ್ತು. 2017ರ ಡಿಸೆಂಬರ್ ನಲ್ಲಿ ಈ ಜೋಡಿ ಇಟಲಿಯಲ್ಲಿ ಮದುವೆಯಾಗಿದ್ದರು.

ಇದನ್ನೂ ಓದಿ: ಟಿ 20 ಕ್ರಿಕೆಟ್ ನಲ್ಲಿ 500 ವಿಕೆಟ್ ಸಾಧನೆ ಮಾಡಿದ ವಿಂಡೀಸ್ ಡ್ವೇನ್ ಬ್ರಾವೋ

Advertisement

Advertisement

Udayavani is now on Telegram. Click here to join our channel and stay updated with the latest news.

Next