ಇತ್ತೀಚೆಗೆ ನಟಿ ಅನುಷ್ಕಾ ಶೆಟ್ಟಿ ಯಾವ ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿಲ್ಲವಲ್ಲ ಎಂದು ಬೇಸರಿಸಿಕೊಳ್ಳುತ್ತಿದ್ದ ಅಭಿಮಾನಿಗಳ ಮುಂದೆ ಅನುಷ್ಕಾ ಶೆಟ್ಟಿ ಹೊಸಲುಕ್‌ನಲ್ಲಿ ಎಂಟ್ರಿ ಕೊಡೋಕೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ತಮ್ಮ ಮಾತಿಗೆ ಬ್ರೇಕ್ ಹಾಕಿರುವ ಅನುಷ್ಕಾ ಎಲ್ಲವನ್ನೂ ಹಾವ-ಭಾವದಲ್ಲೇ ಹೇಳುತ್ತಿದ್ದಾರೆ.
ಹೌದು, ಅನುಷ್ಕಾ ಶೆಟ್ಟಿ ಸದ್ಯ ನಿಶ್ಯಬ್ದಂ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಇತ್ತೀಚೆಗೆ ಅನುಷ್ಕಾ ಬರ್ತ್‌ಡೇ ಸಂದರ್ಭದಲ್ಲೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನುಷ್ಕಾ ಮಾತು ಬಾರದ ಯುವತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅನುಷ್ಕಾ ಕೇವಲ ಮೂಕಾಭಿನಯದಲ್ಲಿ ನಟಿಸಿ¨ªಾರೆ. ನಿಶ್ಯಬ್ದಂ ಹಾರರ್ ಚಿತ್ರವಾಗಿದ್ದು, ಟೀಸರ್‌ನಲ್ಲಿ ಅನುಷ್ಕಾಗೆ ಜೋಡಿಯಾಗಿ ನಟ ಮಾಧವನ್ ಕಾಣಿಸಿಕೊಂಡಿದ್ದಾರೆ.
ಒಂದು ನಿಮಿಷ 14 ಸೆಕೆಂಡ್ ಇರುವ ಈ ವಿಡಿಯೋ ನೋಡಿ ಅನುಷ್ಕಾ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಟೀಸರಿನಲ್ಲಿ ಅನುಷ್ಕಾ ತುಂಬಾನೇ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಅನುಷ್ಕಾ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದರು. ಚೇರ್ ಮೇಲೆ ಕುಳಿತುಕೊಂಡು ಪೇಂಟಿಂಗ್ ಮಾಡುತ್ತಿರುವ ಪೋಸ್ಟರನ್ನು ಅನುಷ್ಕಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಈ ಪೋಸ್ಟರ್ ಐದು ಭಾಷೆಯಲ್ಲಿ ರಿಲೀಸ್ ಆಗಿದೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.
ಅಂದ ಹಾಗೆ, ಈ ಸಿನಿಮಾ ಸುಮಾರು 30 ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ಮಾಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿಶಬ್ದಂ ಸಿನಿಮಾದ ಮೂಲಕ 13 ವರ್ಷಗಳ ನಂತರ ಮಾಧವನ್ ಮತ್ತು ಅನುಷ್ಕಾ ಶೆಟ್ಟಿ ಜೋಡಿ ತೆರೆಯ ಮೇಲೆ ಕಾಣಿಸು vತ್ತಿರುವುದು ವಿಶೇಷವಾಗಿದೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಶಾಲಿನಿ ಪಾಂಡೆ, ಸುಬ್ಬರಾಜು, ಮತ್ತು ಶ್ರೀನಿವಾಸ ಅವಸರಲಾ ತಾರಾಬಳಗವೇ ಸಿನಿಮಾದಲ್ಲಿದೆ. ಒಟ್ಟಾರೆ ಇಲ್ಲಿಯವರೆಗೆ ಅನುಷ್ಕಾ ಮಾತು ಕೇಳಿದವರು ಈ ಚಿತ್ರದಲ್ಲಿ ಅವರ ಮೌನವನ್ನು ಎಷ್ಟರ ಮಟ್ಟಿಗೆ ಇಷ್ಟಪಡುತ್ತಾರೆ ಅನ್ನೋದು ನಿಶ್ಯಬ್ದಂ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.