Advertisement

ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಅನುಶ್ರೀ ಮತ್ತು ಸಾಧಕರಿಗೆ ಸನ್ಮಾನ

03:29 PM Apr 24, 2023 | Team Udayavani |

ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 593 ಅಂಕಗಳನ್ನು ಪಡೆದು ವಾಣಿಜ್ಯ ವಿಭಾಗದಲ್ಲಿ, ರಾಜ್ಯದಲ್ಲಿ 5ನೇ ಸ್ಥಾನವನ್ನು ಗಳಿಸಿದ ಎಸ್.ವಿ.ಎಚ್.‌ ಪದವಿಪೂರ್ವ ಕಾಲೇಜು ಇನ್ನಂಜೆ ಇಲ್ಲಿನ ವಿದ್ಯಾರ್ಥಿನಿ ಅನುಶ್ರೀ ಅವರನ್ನು ಸಂಸ್ಥೆಯ ಪೋಷಕರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸನ್ಮಾನಿಸಿ, ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪಡೆದ ಶಿಕ್ಷಣ ಮತ್ತು ಮೌಲ್ಯಗಳನ್ನು ಜೀವನ ಪರ್ಯಂತ ಅನುಸರಿಸಿ ಶ್ರೇಷ್ಠ ಸಾಧಕಳಾಗಬೇಕು ಎಂದು ಹಾರೈಸಿದರು.

Advertisement

ಕಟಪಾಡಿ, ಚೊಕ್ಕಾಡಿ ಸಮೀಪದ ಕೃಷ್ಣ ಮತ್ತು ಗೀತಾ ದಂಪತಿಗಳ ಪುತ್ರಿಯಾದ ಅನುಶ್ರೀ ತನ್ನ ನಿರೀಕ್ಷೆಗೂ ಮೀರಿದ ತರಬೇತಿಯನ್ನು ನೀಡಿದ ಶಿಕ್ಷಕ ವರ್ಗದ ನಂಬಿಕೆಯನ್ನು ಸಾಕಾರಗೊಳಿಸುವ ಭರವಸೆಯನ್ನು ನೀಡಿದರು. ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ನಿಶಾನ್‌ ಕೋಟ್ಯಾನ್‌, ತೃತೀಯ ಸ್ಥಾನ ಗಳಿಸಿದ ಕುಮಾರಿ ಕುಷಿ, ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕುಮಾರಿ ಸಾಕ್ಷಿ ಕುಲಾಲ್‌, ಕುಮಾರಿ ಯಾತಿಕ ಅಮೀನ್‌ ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಕುಮಾರಿ ಶ್ರೀಲೇಖಾ ಇವರೆಲ್ಲರನ್ನೂ ಶ್ರೀಗಳು ಸನ್ಮಾನಿಸಿ ಶುಭ ಹಾರೈಸಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್‌ ಮಾತನಾಡುತ್ತಾ, ರಾಜ್ಯದಲ್ಲಿ 5ನೇ ಸ್ಥಾನ ಗಳಿಸಿದ ಅನುಶ್ರೀ ಸಾಧನೆಗೆ ಪೂರಕವಾಗಿ ಶ್ರಮಿಸಿದ ನಮ್ಮ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ತಂಡ ಮತ್ತು ವಿದ್ಯಾರ್ಥಿನಿಯ ಪೋಷಕರನ್ನು ವಿಶೇಷವಾಗಿ ಅಭಿನಂದಿಸಿದರು. 47 ವಿಶಿಷ್ಠ ಶ್ರೇಣಿ ಹಾಗೂ 66 ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಸಾಧನೆಯೂ ನಮ್ಮ ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಕನ್ನಡಿಯಂತಿದೆ ಎಂದು ಎಲ್ಲಾ ಸಾಧಕರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪುಂಡರೀಕಾಕ್ಷ ಕೊಡಂಚ, ಉಪನ್ಯಾಸಕರಾದ ಪ್ರಶಾಂತ್‌, ವಿದ್ಯಾರ್ಥಿಗಳ ಪೋಷಕರು ಸನ್ಮಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next