Advertisement
ಈ ಸ್ಪರ್ಧೆಯಲ್ಲಿ ದಕ್ಷಿಣ ವಲಯದಿಂದ 40 ತಂಡಗಳು ಭಾಗವಹಿಸಿದ್ದವು. ಕರ್ನಾಟಕ ರಾಜ್ಯದ ನಾಲ್ಕು ವಲಯಗಳಲ್ಲಿ ಮೊದಲ ಹಂತದ ಸ್ಪರ್ಧೆ ನಡೆಸಿ ಅದರಲ್ಲಿ ವಿಜೇತರಾದ ತಂಡಗಳು ಫೆ.27 ರಿಂದ 29ರ ತನಕ ಬೆಂಗಳೂರಿನಲ್ಲಿ ಎರಡನೇ ಹಾಗೂ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸುತ್ತವೆ.
Related Articles
Advertisement
ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಸದಾನಂದ .ಎಲ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ನಿಶಿತಾ ಬಿ. ರಾವ್ ಮತ್ತು ಪಂಚಮಿ ಹೆಬ್ಟಾರ್ ಅವರು ಒಳಕಾಡು ಜಿ ಎಚ್‌ಎಸ್ ಪ್ರೌಢಶಾಲಾ ವಿದ್ಯಾರ್ಥಿಗಳಾದ ವಿಶ್ವ ಮತ್ತು ಆಶ್ಲೇಷ್ ಅವರೊಂದಿಗೆ ಅಭಿವೃದ್ಧಿ ಪಡಿಸಿದ ಟ್ರ್ಯಾಶ್‌ಟ್ರ್ಯಾಕರ್ ಪ್ರಾಜೆಕ್ಟ್ ಗೆ 5ನೇ ಸ್ಥಾನ ಹಾಗೂ ಬಂಟಕಲ್ ವಿದ್ಯಾಸಂಸ್ಥೆಯ ಭೂಷಣ್ ಪೂಜಾರಿ ಮತ್ತು ಕೆ. ಅನುಷಾ ವಿ. ಪ್ರಭು ಅವರು ಕಾರ್ಕಳದ ಭುವನೇಂದ್ರ ಪ್ರೌಢಶಾಲಾ ವಿದ್ಯಾರ್ಥಿಗಳಾದ ಸಿದ್ದರಾಜು ಮತ್ತು ಶ್ರೀವರ ಅವರೊಂದಿಗೆ ಅಭಿವೃದ್ಧಿ ಪಡಿಸಿದ ಪ್ರಾಜೆಕ್ಟ್ ಗೆ ಸಮಾಧಾನಕರ ಬಹುಮಾನ ದೊರೆತಿದೆ.
ಅನ್ವೇಷಣಾ-2024 ಸ್ಪರ್ಧೆ ಸ್ಪರ್ಧೆಯು ಆವಿಷ್ಕಾರಗಳಿಗೆ ಸೇತುವೆ ನಿರ್ಮಾಣ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಾಗಿದ್ದು, ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಸಿನೋಪ್ಸಿಸ್, ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಂಟಿಯಾಗಿ ಈ ಸ್ಪರ್ಧೆಯನ್ನು ಪ್ರಾಯೋಜಿಸುತ್ತಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತೀತಂಡದ ನಾಲ್ಕು ವಿದ್ಯಾರ್ಥಿಗಳಲ್ಲಿ ಇಬ್ಬರು ಸಮೀಪದ ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿರಬೇಕು ಎಂಬ ನಿಯಮವು ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನದ ಅಭಿವೃದ್ಧಿಗೆ ಸಹಕಾರಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬಂದಿ ವರ್ಗ ಶುಭ ಹಾರೈಸಿದ್ದಾರೆ.