Advertisement

ಮಳೆ ಕಣ್ಣಾ ಮುಚ್ಚಾಲೆಗೆ ಆತಂಕ

04:20 PM Jun 24, 2018 | |

ಬೆಳಗಾವಿ: ಮುಂಗಾರು ಮಳೆ ಆರಂಭವಾಗಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಕಣ್ಣುಮುಚ್ಚಾಲೆ ಆಟ ನಡೆದಿದೆ.
ಇದರಿಂದ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ. ಇದು ಕೃಷಿಕರಲ್ಲಿ ಚಿಂತೆ ಹೆಚ್ಚಲು
ಕಾರಣವಾಗಿದೆ.

Advertisement

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಹಿಡಕಲ್‌ ಹಾಗೂ ಮಲಪ್ರಭಾ ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದ
ನೀರು ಸಂಗ್ರಹವಿದೆ. ಆದರೆ ಇನ್ನೂ ಆತಂಕ ದೂರವಾಗಿಲ್ಲ. ಕಳೆದ ಒಂದು ವಾರದಿಂದ ಮಳೆ ಮಾಯವಾಗಿರುವುದರಿಂದ ಎರಡೂ ಜಲಾಶಯಗಳ ಒಳಹರಿವಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ.

ಒಟ್ಟು 2175 ಅಡಿ ಸಾಮರ್ಥ್ಯದ ಹಿಡಕಲ್‌ ಜಲಾಶಯದಲ್ಲಿ ಈಗ 2079 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 15 ಅಡಿಗಳಷ್ಟು ಹೆಚ್ಚು ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಆದರೆ ಜಲಾಶಯಕ್ಕೆ ಈಗ ಕೇವಲ 533 ಕ್ಯೂಸೆಕ್‌ ನೀರು ಹರಿದು ಬರುತ್ತಿರುವುದು ಸಹಜವಾಗಿಯೇ ಚಿಂತೆ ಹುಟ್ಟಿಸಿದೆ. 

ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯಕ್ಕೆ ನೀರು ಬರುತ್ತಿಲ್ಲ. ಸಾಮಾನ್ಯವಾಗಿ ಈ ಅವಧಿಯಲ್ಲಿ 2000 ಕ್ಯೂಸೆಕ್‌ ನೀರು ಬರಬೇಕಿತ್ತು. ಆದರೆ ಈಗ 500 ಕ್ಯುಸೆಕ್‌ ಮಾತ್ರ ಬರುತ್ತಿದೆ. ಆದರಲ್ಲಿ 93 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

ಹಿಡಕಲ್‌ ಜಲಾಶಯಕ್ಕೆ ನೆರೆಯ ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶವೇ ಜಲಾನಯನ ಪ್ರದೇಶವಾಗಿದ್ದು, ಬರುವ ದಿನಗಳಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾದರೆ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರಲಿದೆ
ಎಂಬುದು ನೀರಾವರಿ ನಿಗಮದ ಅಧಿಕಾರಿಗಳ ಹೇಳಿಕೆ.

Advertisement

ಜಲಾಶಯಕ್ಕೆ ಈಗ 739 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಈ ಅವಧಿಗೆ ಯಾವುದೇ ಒಳಹರಿವು ಇರಲಿಲ್ಲ. ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದಲ್ಲಿ ಈಗ 2454.40 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಸಾಮರ್ಥ್ಯ ಒಟ್ಟು 2476 ಅಡಿಗಳಷ್ಟಿದೆ. ಕಳೆದ ವರ್ಷ ಈ ಅವಧಿಗೆ ಜಲಾಶಯದಲ್ಲಿ 2447.40 ಅಡಿ ನೀರು ಸಂಗ್ರಹವಾಗಿತು.

ಇನ್ನು ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಜೀವನಾಡಿಯಾಗಿರುವ ಮಲಪ್ರಭಾ ಜಲಾಶಯದ
ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಖಾನಾಪುರ ತಾಲೂಕಿನಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈಗ 2039.80 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಜೂ.23 ರಂದು ಜಲಾಶಯದಲ್ಲಿ 2033.52 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಅಂದರೆ ಈಗ ಆರು ಅಡಿಗಳಷ್ಟು ಹೆಚ್ಚು ನೀರು ಸಂಗ್ರಹವಿದೆ. ಆದರೆ ಜಲಾಶಯ ಭರ್ತಿಯಾಗುವುದೇ ಇಲ್ಲವೆ ಎನ್ನುವ ಅನುಮಾನ ಕಾಡುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next