Advertisement

ಚೆಕ್‌ಪೋಸ್ಟ್‌ಗಳಲ್ಲಿ ಕಣ್ತಪ್ಪಿಸಿ ಬಂದರೆ ಕ್ವಾರಂಟೈನ್‌: ಡಿಸಿ

11:22 AM May 13, 2020 | mahesh |

ಉಡುಪಿ: ಕೋವಿಡ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಡುವೆ ಗಡಿ ಭಾಗಗಳಲ್ಲಿನ ಚೆಕ್‌ ಪೋಸ್ಟ್‌ಗಳಲ್ಲಿ ತಪ್ಪಿಸಿಕೊಂಡು ಬಂದರೆ ಅಂತಹವರನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಒಳ ಪಡಿಸುತ್ತೆವೆ ಎಂದು ಉಡುಪಿ ಡಿಸಿ ಜಿ. ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಗಡಿಭಾಗದ ಚೆಕ್‌ಪೋಸ್ಟ್‌ ಗಳಲ್ಲಿ ಯಾರೂ ನಿಯಮ ಮೀರಿ ಅನುಮತಿಯಿಲ್ಲದೆ ಜಿಲ್ಲೆಯ ಒಳಗೆ ಬರುವುದಕ್ಕೆ, ಹೊರ ಹೋಗುವುದಕ್ಕೆ ಅವಕಾಶವಿಲ್ಲ. ಅಂತಹವರನ್ನು
ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಹಳ್ಳಿಗಳಲ್ಲಿ ಗ್ರಾ.ಪಂ ಕಾರ್ಯಪಡೆಗೆ ನಗರ ಪ್ರದೇಶದಲ್ಲಿ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಕ್ವಾರಂಟೈನ್‌ಗೆ ಒಳಪಡಿಸುವ ಜವಾಬ್ದಾರಿ ಹೊರುತ್ತಾರೆ. ಹೊರ ರಾಜ್ಯಗಳಿಂದ ಯಾರಾದರೂ ತಪ್ಪಿಸಿ ಬಂದಿದ್ದರೆ ಸಾರ್ವಜನಿಕರು ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆ ಅವರು ವಿನಂತಿಸಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಬಂದ ತತ್‌ಕ್ಷಣ ಕ್ರಮ ಕೈಗೊಳ್ಳಲಾಗುವುದು. ಕಣ್ತಪ್ಪಿಸಿ ಬಂದವರ ಆರೋಗ್ಯ ಪರೀಕ್ಷೆ ನಡೆಸಿ ಕ್ವಾರಂಟೈನ್‌ ಮಾಡಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next