ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಪೊಲೀಸ್ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ರಾಜ್ಯ ಪೊಲೀಸ್ ದೂರು ಪ್ರಾಕಾರ ಮತ್ತು ನೊಂದವರ ಪರಿಹಾರದ ಬಗ್ಗೆ ಮಾಹಿತಿ ಶಿಬಿರ ಕುಂದಾಪುರದ ತಾ.ಪಂ. ಸಭಾಂಗಣದಲ್ಲಿ ಜರಗಿತು.
ಕುಂದಾಪುರದ ಹೆಚ್ಚುವರಿ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶ ಪ್ರವೀಣ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನೊಂದವರಿಗೆ ಪರಿಹಾರ ನೀಡಲು ಕಾನೂನು ಇದ್ದು, ಸಿ.ಆರ್.ಪಿ. 357ಎ ಪ್ರಕಾರ ಅಪರಾಧ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ್ಯಾಯಾಲಯ ಆದೇಶ ನೀಡುತ್ತದೆ, ಸಾವು, ನೋವು, ದೊಂಬಿ ಮುಂತಾದ ಪ್ರಕರಣ ಗಳಲ್ಲಿ ನೊಂದವರು ಪರಿಹಾರ ಪಡೆಯ ಬಹು ದಾಗಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತಹ ತೀರ್ಪು ಹೊರಬಿದ್ದ ಬಳಿಕ ನೊಂದವರು ಪರಿಹಾರ ಪಡೆಯಲು ಅರ್ಹರು, ಆದ್ದರಿಂದ ನೊಂದವರು ಈ ಕಾಯಿದೆಯ ಪ್ರಯೋಜನ ಪಡೆಯಬೇಕು ಎಂದರು.
ಕುಂದಾಪುರ ಬಾರ್ ಅಸೋಸಿಯೇಶನ್ (ರಿ.) ಕುಂದಾಪುರ ಇದರ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧಿಧೀಶ ಮತ್ತು ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಡಿ.ಪಿ. ಕುಮಾರ ಸ್ವಾಮಿ, ಕುಂದಾಪುರ ಬಾರ್ ಅಸೋಸಿಯೇಶನ್ (ರಿ.) ಕುಂದಾಪುರ ಇದರ ಪ್ರಧಾನ ಕಾರ್ಯದರ್ಶಿ ಎಚ್. ರವೀಶ್ಚಂದ್ರ ಶೆಟ್ಟಿ, ಕುಂದಾಪುರದ ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲಾ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಹಿರಿಯ ನ್ಯಾಯವಾದಿ ಟಿ.ಬಿ ಶೆಟ್ಟಿ ಅವರು ನೊಂದವರ ಪರಿಹಾರದ ಬಗ್ಗೆ ಮತ್ತು ಕುಂದಾಪುರದ ವೃತ್ತ ನಿರೀಕ್ಷಕ ಮಂಜಪ್ಪ ಡಿ. ಆರ್. ಅವರು ರಾಜ್ಯ ಪೊಲೀಸ್ ದೂರು ಪ್ರಾ ಧಿಕಾರದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕುಂದಾಪುರ ಪೊಲೀಸ್ ಉಪ ನಿರೀಕ್ಷಕ ನಾಸೀರ್ ಹುಸೇನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು, ಶಂಕರನಾರಾಯಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸುನೀಲ್ ಕುಮಾರ್ ವಂದಿಸಿದರು.